ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದು, ಭಾರೀ ವಿವಾದ ಸೃಷ್ಠಿಸಿತ್ತು. ಆ ಘಟನೆಯನ್ನು ಬಿಜೆಪಿ-ಜೆಡಿಎಸ್ ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದವು. ಇದೀಗ, ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ. ತೆರವುಗೊಳಿಸಿದ್ದರ ವಿರುದ್ಧ ಬಿಜೆಪಿ, ಹಿಂದುಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೆ.ಆರ್ ಪೇಟೆ ನಗರದ ಟಿ.ಬಿ ವೃತ್ತದಲ್ಲಿ ಹಾರಿಸಲಾಗಿದ್ದ ಭಗವಾಧ್ವಜವನ್ನು ಪುರಸಭೆ ಅಧಿಕಾರಿಗಳು ಧ್ವಜ ತೆರವುಗೊಳಿಸಿದ್ದಾರೆ. ಅನುಮತಿ ಪಡೆಯದೆಯೇ ಸರ್ಕಾರಿ ಜಾಗದ ಧ್ವಜಸ್ತಂಭದಲ್ಲಿ ಭಗವಾಧ್ವಜ ಹಾರಿಸಿದ್ದರಿಂದ ಅದನ್ನು ತೆರವುಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಧ್ವಜ ತೆರವುಗೊಳಿಸಿದ್ದನ್ನ ವಿರೋಧಿಸಿ ಭಾನುವಾರ ಬೆಳಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.