ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು ಇಂದು ಕೂಡಾ ವರುಣನ ಅಬ್ಬರ ಮುಂದುವರಿಯಲಿದೆ.
ಇಂದು ಕರಾವಳಿ ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಗುಲ್ಬರ್ಗ, ಬೀದರ್, ಯಾದಗಿರಿ, ಹಾಸನ, ಚಾಮರಾಜನಗರದಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಮುಂದಿನ ಎರಡು ದಿನಗಳ ಕಾಲ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಕೊಡಗು ಹಾಸನದಲ್ಲಿಯೂ ಮಳೆ ತೀವ್ರವಾಗಿರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿದ್ದೀರಾ? ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಸೋಮವಾರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೆೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ವಿಜಯಪುರ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್‌ನ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ . ದಕ್ಷಿಣ ಒಳನಾಡಿನ ದಾವಣಗೆರೆ, ತುಂಕೂರ್, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದೆ.
Rainfall Warning: South Interior Karnataka on 16th-17th July 2024
वर्षा की चेतावनी: 16-17 जुलाई 2024 को आंतरिक दक्षिणी कर्नाटक में :#weatherupdate #rainfallwarning @moesgoi @ndmaindia @DDNational @airnewsalerts pic.twitter.com/w8kRGvs9ph
— India Meteorological Department (@Indiametdept) July 13, 2024