ರೈತರು ಉಳಿವಿಗಾಗಿ ಬಿಜೆಪಿ ಸೋಲಿಸಬೇಕು; ರೈತ ಮುಖಂಡರ ತೀರ್ಮಾನ

Date:


ರಾಜ್ಯದ ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಉಳಿಯಬೇಕು, ಸಾಮಾಜಿಕ ನ್ಯಾಯ, ಕೋಮು ಸೌಹಾರ್ಹದೆ ಉಳಿಸಿ ಪ್ರಜಾಪ್ರಭುತ್ವ, ಸಾಮರಸ್ಯವನ್ನು ಎತ್ತಿ ಹಿಡಿಯಲು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಎಲ್ಲ ರೈತ ಮತ್ತು ಕೃಷಿ ಕೂಲಿಕಾರರ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಒಮ್ಮತದ ತೀರ್ಮಾನ ಮಾಡಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಎದ್ದೇಳು ಕರ್ನಾಟಕ ಮತ್ತು ಸಂಯುಕ್ತ ಕಿಸಾನ್‌ ಪಂಚಾಯತ್‌ ನೇತೃತ್ವದಲ್ಲಿ ಆಯೋಜನೆಯಾಗಿದ್ದ ರೈತ ಹಕ್ಕೊತ್ತಾಯ ಮಂಡನೆ, ರಾಜಕೀಯ ಪಕ್ಷಗಳೊಂದಿಗೆ ರೈತ ಮುಖಂಡರ ಮುಖಾಮುಖಿ ಚರ್ಚೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಬಸವರಾಜಪ್ಪ ಬಣ), ಭಾರತೀಯ ಕೃಷಿಕ ಸಮಾಜ, ರೈತ ಕೂಲಿ ಸಂಘ, ಭೂಮಿ ಮತ್ತು ವಸತಿ ಹಕ್ಕು, ವಂಚಿತರ ಹೋರಾಟ ಸಮಿತಿ ಸೇರಿದಂತೆ 15 ಪ್ರಗತಿಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಬಿಜೆಪಿಗೆ ಪ್ರಬಲ ಪೈಪೋಟಿ ಇರುವ ಕಡೆ ಪ್ರಜಾಪ್ರಭುತ್ವವನ್ನು ಒಪ್ಪುವ ಅಭ್ಯರ್ಥಿಗಳನ್ನು ಬೆಂಬಲಿಸಿ ಮತ ನೀಡೋಣ, ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯೋಣ ಎಂದು ನಿರ್ಣಯ ತೆಗೆದುಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ ಸಿ.ಬಯ್ಯಾರೆಡ್ಡಿ ಮಾತನಾಡಿ, “ರಾಜ್ಯದ ವಿಧಾನಸೌಧ ಚುನಾವಣೆ ಲೋಕಸಭಾ ಚುನಾವಣೆಗೆ ಮೈಲಿಗಲ್ಲು. ಯಾವ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ ಎಂಬುದು ಮುಖ್ಯವಲ್ಲ, ರೈತರ ಬದುಕಿಗೆ ಮಾರಕವಾಗಿರುವ ಬಿಜೆಪಿಯನ್ನು ಖಡಾಖಂಡಿತವಾಗಿ ಸೋಲಿಸಬೇಕು ಅನ್ನೋದು ಆದ್ಯತೆಯಾಗಬೇಕು” ಎಂದು ಕರೆ ಕೊಟ್ಟರು.

“ಬಿಜೆಪಿಯನ್ನು ರಾಜ್ಯದಲ್ಲಿ ಸೋಲಿಸದಿದ್ದರೆ ಮತ್ತೆ ಇಡೀ ದೇಶದಲ್ಲಿ ಕೋಮು ಸಂಘರ್ಷ ಸೃಷ್ಟಿಸಿ ಸಾಮಾಜಿಕ ಅಲ್ಲೋಲ -ಕಲ್ಲೋಲ ಸೃಷ್ಟಿಸುತ್ತಾರೆ. ಪ್ರಜಾಪ್ರಭುತ್ವ ನಾಶವಾಗುತ್ತದೆ. ಯಾವ ಪಕ್ಷ ಗೆಲ್ಲುತ್ತದೆ ಎಂಬುದು ಮುಖ್ಯ ಆಗಬಾರದು. ಬಿಜೆಪಿಗೆ ಪ್ರಬಲ ಪೈಪೋಟಿಯೊಡ್ಡುವ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ಪಕ್ಷ ಅಥವಾ ಅಭ್ಯರ್ಥಿಯನ್ನು ಬೆಂಬಲಿಸಬೇಕು” ಎಂದರು.

ರೈತ ಸಮುದಾಯವನ್ನು ಹೀನಾಯ ಸ್ಥಿತಿಗೆ ತಳ್ಳಿರುವ ಬಿಜೆಪಿಗಿಂತ ಉಳಿದ ಎರಡು ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌, ನಾವು ಬಿನ್ನವಾಗಿದ್ದೇವೆ ಎಂಬುದನ್ನು ನಿರೂಪಿಸಿಕೊಳ್ಳಬೇಕು. ರೈತರ ಬಹುಮುಖ್ಯ ಹಕ್ಕೊತ್ತಾಯಗಳನ್ನು ಒಪ್ಪಿ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಬಯ್ಯಾರೆಡ್ಡಿ ಒತ್ತಾಯಿಸಿದರು.

ಈ ವೇಳೆ ರಾಷ್ಟ್ರೀಯ ಕಿಸಾನ್‌ ಮೋರ್ಚಾ ನಾಯಕ ಯೋಗೇಂದ್ರ ಯಾದವ್‌ ಮಾಡತನಾಡಿ, “ಇಡೀ ದೇಶದಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಇರುವುದು ರೈತರಿಗೆ ಮಾತ್ರ. ದೇಶವನ್ನು ಉಳಿಸಲು, ರೈತ ಪರ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಸರ್ಕಾರವನ್ನು ಅಸ್ಥಿತ್ವಕ್ಕೆ ತರಬೇಕು. ಅದಕ್ಕೆ ಕರ್ನಾಟಕದ ವಿಧಾನಸಭಾ ಚುಮಾವಣೆ ದಿಕ್ಸೂಚಿಯಾಗಬೇಕು” ಎಂದು ಕರೆ ನೀಡಿದರು.

“ರೈತರ ಆದಾಯವನ್ನು ದ್ವಿಗುಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರ ಮಾತು ನಿಜವಾಗಿದೆಯಾ? ಯಾಕೆ ರೈತರ ಆದಾಯ ಕುಸಿದಿದೆ. ಫಸಲ್‌ ಬಿಮಾ ಯೋಜನೆ ಪರಿಚಯಿಸಿದ ನಂತರದಲ್ಲೇ ರೈತರ ಆದಾಯ ಯಾಕೆ ಕುಸಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಎಚ್ಚರಿಸಿದರು.

ರೈತಪರ ಹಕ್ಕೊತ್ತಾಯ ಮಂಡನೆ ಮತ್ತು ಚರ್ಚೆಗೆ ರಾಜ್ಯದ ಪ್ರಬಲ ಮೂರು ಪಕ್ಷದ ನಾಯಕರನ್ನೂ ಆಹ್ವಾನಿಸಲಾಗಿತ್ತು. ಆದರೆ, ಬಿಜೆಪಿಯ ಯಾವುದೇ ನಾಯಕರು ಸಭೆಯಲ್ಲಿ ಭಾಗವಹಿಸಿಲ್ಲ. ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

“ಮೂರು ಪಕ್ಷದವರನ್ನು ಕರೆಯಲಾಗಿತ್ತು. ಈಗಾಗಲೇ ಹಲವು ರೀತಿಯಲ್ಲಿ ರೈತ ಸಮುದಾಯವನ್ನು ದಿವಾಳಿ ಮಾಡಿ ಕಾರ್ಪೊರೇಟ್‌ ಕಂಪನಿಗಳಿಗೆ ಮಣೆ ಹಾಕುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿಯಿಂದ ಏನನ್ನು ನಿರೀಕ್ಷೆ ಮಾಡಲಾಗುವುದಿಲ್ಲ. ಅದು ತಾನು ರೈತರ ಪರವಾದ ಪಕ್ಷ ಅಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿಕೊಂಡಿದೆ. ಹಾಗಾಗಿ ಇಡೀ ರಾಜ್ಯದ ರೈತರು ಬಿಜೆಪಿಗೆ ಪೈಪೋಟಿ ನೀಡಬಲ್ಲ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ಮತ್ತು ರೈತಪರ ಕಾಳಜಿ ಇರುವ ಅಭ್ಯರ್ಥಿಗಳಿಗೆ ಅಥವಾ ಪಕ್ಷಕ್ಕೆ ಮತ ನೀಡಬೇಕು” ಎಂದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ರಾಜೀವ್‌ ಶುಕ್ಲಾ, ರಘುನಂದನ್, ರೈತ ನಾಯಕರಾದ ಬಡಗಲಪುರ ನಾಗೇಂದ್ರ, ಆರ್ಥಿಕ ತಜ್ಞರಾದ ಪ್ರಕಾಶ್ ಕಮ್ಮರಡಿ,‌ ಹನ್ನನ್ನ್‌ ಮೊಲ್ಲಾ, ಮಂಜುನಾಥ್, ಕಾರ್ಮಿಕ ಸಂಘಟನೆಯ ನಿಂಗಮ್ಮ, ಮರಿಯಪ್ಪ, ಡಿಎಸ್ ಪೂಜಾರ್ ಹಾಗೂ ರೈತ ಮತ್ತು ಕಾರ್ಮಿಕ ಸಂಘಟನೆಯ ಎಲ್ಲ ಪ್ರಮುಖ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ರೈತ ಸಮುದಾಯದ 15 ಪ್ರಮುಖ ಹಕ್ಕೊತ್ತಾಯಗಳು

  • ಕೇಂದ್ರ ಸರ್ಕಾರ ರೈತರ ವಿರೋಧದ ನಡುವೆಯೂ ಜಾರಿ ಮಾಡಿದ್ದ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದರೂ ರಾಜ್ಯ ಬಿಜೆಪಿ ಮಾತ್ರ ರೈತವಿರೋಧಿ ಕೃಷಿ ಕಾಯ್ದೆಗಳನ್ನು ಉಳಿಸಿಕೊಂಡಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಹೊಸ ಸರ್ಕಾರ ರಚನೆಯಾದ ಕೂಡಲೇ ಭೂ ಸುಧಾರಣಾ ತಿದ್ದುವರಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಯಂತ್ರಣ ಕಾಯ್ದೆಗಳನ್ನು ರದ್ದುಗೊಳಿಸಬೇಕು.
  • ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗುತ್ತಿರುವ ವಿದ್ಯುತ್‌ ಖಾಸಗೀಕರಣ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು. ವಿದ್ಯುತ್ ಖಾಸಗೀಕರಣ ಕೈಬಿಟ್ಟು, ರೈತರಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಮುಂದುವರೆಸಬೇಕು.
  • ರೈತರ ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ಕಾನೂನಾತ್ಮಕವಾಗಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗೆ ತರಬೇಕು. ಪ್ರಕಾಶ್ ಕಮ್ಮರಡಿ ನೇತೃತ್ವದ ಆಯೋಗದ ವರದಿಯನ್ನು ರೈತ ಪ್ರತಿನಿಧಿಗಳ ಜೊತೆ ಸಮಾಲೋಚಿಸಿ, ಪರಿಷ್ಕರಿಸಿ, ಅಗತ್ಯ ತಿದ್ದುಪಡಿಗಳೊಂದಿಗೆ ಜಾರಿಗೊಳಿಸಬೇಕು.
  • ರಾಜ್ಯದಲ್ಲಿ ನಷ್ಟಕ್ಕೆ ತುತ್ತಾಗಿರುವ ಕಬ್ಬು, ಕೊಬ್ಬರಿ, ಅರಿಷಿಣ ಮುಂತಾದ ವಾಣಿಜ್ಯ ಬೆಳೆ ಉತ್ಪಾದಕರ ನೆರವಿಗೆ ಮುಂಬರುವ ರಾಜ್ಯ ಸರ್ಕಾರ ಧಾವಿಸಬೇಕು. ಅತಿವೃಷ್ಟಿಯಿಂದ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ವಿಮಾ ಸೌಲಭ್ಯದ ಮೂಲಕ ರಕ್ಷಣೆ ನೀಡಬೇಕು. ಪ್ರಾಕೃತಿಕ ಬೆಳೆ ನಷ್ಟವನ್ನು ನಿಭಾಯಿಸಲು ₹10 ಸಾವಿರ ಕೋಟಿಗಳ ಇಡಗಂಟು ನಿಧಿ ರಚಿಸಬೇಕು.
  • ಕೃಷಿ ಸಾಲದಿಂದ ಕಂಗಾಲಾಗುತ್ತಿರುವ ರೈತರು ಮಾನಸಿಕ ಒತ್ತಡದಿಂದ ಆತ್ಮಹತ್ಯೆಗೆ ದಾರಿ ಹಿಡಿಯುತ್ತಿದ್ದು, ಅದನ್ನು ತಪ್ಪಿಸಲು ಸಾಲಮುಕ್ತಿ ಕಾಯ್ದೆಯನ್ನು ಜಾರಿಗೆ ತರಬೇಕು. ರೈತರ ಎಲ್ಲ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಭೂಮಿ ದಾಖಲಾತಿ ಇಲ್ಲದಿರುವ ರೈತರಿಗೂ ಕೃಷಿ ಸಾಲ ಪಡೆಯಲು ಅವಕಾಶವಿರಬೇಕು. ಕೃಷಿ ಸಾಲದ ಮೊತ್ತವನ್ನು ಕನಿಷ್ಠ ₹1 ಲಕ್ಷಕ್ಕೆ ಹೆಚ್ಚಿಸಬೇಕು.
  • ರಾಜ್ಯದಲ್ಲಿ 1995 ರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಎಲ್ಲ ರೈತ ಕುಟುಂಬಗಳ ಮಹಿಳಾ ರೈತರ ಪುನರ್ವಸತಿಗಾಗಿ ಗುರುತಿನ ಚೀಟಿ ನೀಡಬೇಕು ಮತ್ತು ಬಾಕಿ ಸಾಲವನ್ನು ಮನ್ನಾ ಮಾಡಬೇಕು.
  • ಬಗರ್ ಹುಕುಂ ಭೂಮಿಗಳನ್ನು ಕೂಡಲೇ ಬಡ ಉಳುಮೆದಾರರಿಗೆ ಮಂಜೂರು ಮಾಡಬೇಕು. ಸರ್ಕಾರಿ ಭೂಮಿಗಳಲ್ಲಿ ಬಡವರು ಕಟ್ಟಿಕೊಂಡಿರುವ ಮನೆಗಳ ನಿವೇಶನಗಳನ್ನು ಕೂಡಲೇ ಅವರಿಗೆ ಮಂಜೂರು ಮಾಡಬೇಕು. ಪುನರ್ವಸತಿ ಕುಟುಂಬಕ್ಕೊಂದು ಸ್ವಂತದ ಸೂರು ನೀತಿಯನ್ನು ಜಾರಿಗೆ ತರಬೇಕು. ಸರ್ಕಾರಿ ಭೂಮಿಯ ಹಂಚಿಕೆಯ ಮೊದಲ ಆದ್ಯತೆ ವಸತಿಯಾಗಿರಬೇಕು. ಬಿಜೆಪಿ ಸರ್ಕಾರ ನಿಷ್ಕ್ರಿಯಗೊಳಿಸಿರುವ ಉನ್ನತ ಸಮಿತಿಯನ್ನು ಮತ್ತೆ ಪುನರಚನೆ ಮಾಡಿ ಕಾರ್ಯರೂಪಕ್ಕೆ ತರಬೇಕು.
  • ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ, ರಾಜಕಾರಣಿಗಳಿಗೆ, ಬಲಾಡ್ಯರಿಗೆ ತಮಗೆ ಬೇಕಾದವರಿಗೆ ಮನ ಬಂದಂತೆ ಭೂಮಿ ಪರಭಾರ ಮಾಡುವುದನ್ನು ನಿಲ್ಲಿಸಬೇಕು. ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಮರು ಭೂಮಿ ವರ್ಗಾವಣೆ ತಪ್ಪಿಸಿ, ಅವಲಂಬಿತ ಕುಟುಂಬಗಳಿಗೆ ಮತ್ತು ಭೂ ಹೀನರಿಗೆ ಮೀಸಲಾಗಿರಬೇಕು.
  • ರೈತರ ಇಚ್ಛೆಗೆ ವಿರುದ್ಧವಾಗಿ ಕೃಷಿ ಭೂಮಿ ಸೇರಿದಂತೆ ಯಾವುದೇ ಭೂಮಿಯನ್ನೂ ಸ್ವಾಧೀನ ಪಡಿಸಿಕೊಳ್ಳಬಾರದು. ಅನಿವಾರ್ಯತ್ತೆ ಇದ್ದಲ್ಲಿ ರೈತರ ಮಾಲಿಕತ್ವ ರದ್ದುಪಡಿಸದೆ ಪಡೆದುಕೊಳ್ಳಬೇಕು ಮತ್ತು ನಿಯಮಿತವಾಗಿ ರೈತ ಕುಟುಂಬಕ್ಕೆ ಆದಾಯ ದೂರಕುವಂತೆ ಮಾಡಬೇಕು.
  • 2006ರ ಅರಣ್ಯ ಹಕ್ಕು ಕಾಯ್ದೆ ಸರಿಯಾದ ಅನುಷ್ಠಾನವಾಗಬೇಕು. ಜನ ವಿರೋಧಿ ಅರಣ್ಯ ಯೋಜನೆ ಅಥವಾ ವರದಿಗಳ ಹೆಸರಿನಲ್ಲಿ ಯಾವುದೇ ಅರಣ್ಯವಾಸಿ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು.
  • ನರೇಗಾ ಯೋಜನೆಯನ್ನು ಬಲಪಡಿಸಬೇಕು ಮತ್ತು ಪೂರ್ಣಪ್ರಮಾಣದಲ್ಲಿ ಜಾರಿಗೆ ತರಬೇಕು. ಈ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಕಾರ್ಮಿಕರಿಗೆ ನೆರವಾಗುವ ಯೋಜನೆಗಳನ್ನು ಮತ್ತು ಕೃಷಿ ಕೂಲಿಗಳ ಅಭಿವೃದ್ಧಿಗೆ ಕಲ್ಯಾಣ ಮಂಡಳಿಯನ್ನು ನೇಮಿಸಬೇಕು.
  • ಬಾಕಿ ಇರುವ ನೀರಾವರಿ ಯೋಜನೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಅಲ್ಲದೆ, ಎತ್ತಿನಹೊಳೆ, ಮೆಕೆದಾಟು ಸೇರಿದಂತೆ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಬೇಕು.
  • ಪರಿಸರದ, ರೈತರ, ಬಳಕೆದಾರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೃಷಿಯಲ್ಲಿ ಕ್ರಿಮಿನಾಶಕ ಅಥವಾ ಜೀವಾಣು ಬದಲಾವಣೆಯಂತಹ ವಿಷಯುಕ್ತ ತಂತ್ರಜ್ಞಾನವನ್ನು ಪ್ರೋತ್ಸಾಹಿಸುವುದನ್ನು ನಿಲ್ಲಿಸಬೇಕು. ಜಿಎಂ ತಂತ್ರಜ್ಞಾನದ ಮೂಲಕ ಬಿತ್ತನೆ ಬೀಜದ ಮೇಲೆ ಕಾರ್ಪೊರೇಟ್ ಕಂಪನಿಗಳು ಮೇಲಾಧಿಪತ್ಯ ಸಾಧಿಸುವುದನ್ನು ತಡೆಯಬೇಕು.
  • ಕರ್ನಾಟಕದ ರೈತ ಸಮುದಾಯ ಶಾಂತಿ ಪ್ರಿಯ ಸಮುದಾಯವಾಗಿದೆ ವಿವಿಧ ಜಾತಿ, ಧರ್ಮಗಳಿಂದ ಅದು ಕೂಡಿದರೂ ಕೂಡಿ ಬಾಳುವ ಸಂಸ್ಕೃತಿಯನ್ನು ಮೈ ಗುಡಿಸಿಕೊಂಡು ಬಂದಿರುವುದು ಅದರ ಹೆಮ್ಮೆಯ ವರಂವರೆಯಾಗಿದೆ. ರಾಜಕೀಯಕ್ಕಾಗಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಮೇಲಾಟ ನಡೆಸಿರುವುದನ್ನು ಕಂಡು ರೈತ ಕುಲ ಕಳವಳಕ್ಕೆ ತುತ್ತಾಗಿದೆ. ಇದಕ್ಕೆ ಕೊನೆ ಹಾಡಬೇಕೆಂದು ರಾಜಕೀಯ ವಕ್ಷಗಳನ್ನು ಒತ್ತಾಯಿಸುತ್ತದೆ.
  • ರೈತ ಸಮುದಾಯ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಬಯಸುತ್ತದೆ. ಸರ್ಕಾರಿ ಇಲಾಖೆಗಳಲ್ಲಿ ಲಂಚ ನೀಡಿ ರೈತರು ದಣಿದಿದ್ದಾರೆ. ಸರ್ಕಾರದ ಕೃಷಿ ಸಂಬಂಧಿತ ನೀತಿ ನಿರೂಪಣೆಗಳು ಮುಕ್ತವಾಗಿ, ರೈತರನ್ನು ಒಳಗೊಂಡು ನಡೆಯಬೇಕು. ಸರ್ಕಾರದ ನೀತಿಗಳು ರೈತ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪುಗೊಳ್ಳಬೇಕೇ ಹೊರತು ಕಂಪನಿಗಳ ಹಿತಕ್ಕಾಗಿ ಅಲ್ಲ. ಬಹುಮುಖ್ಯವಾಗಿ,
  • ಕೃಷಿ ವಿಚಾರಗಳಲ್ಲಿ ರಾಜ್ಯ ಸರ್ಕಾರದ ಸಂವಿಧಾನಿಕ ಅಧಿಕಾರವನ್ನು ಕಿತ್ತುಹಾಕುವ ಕೇಂದ್ರ ಸರ್ಕಾರದ ನಡೆಗಳನ್ನು ದಿಟ್ಟವಾಗಿ ವಿರೋಧಿಸಬೇಕು.
  • ನಂದಿನಿ ಹಾಲು ರಾಜ್ಯದ 15 ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕ ಸಹಕಾರಿ ಸಂಸ್ಥೆಗಳ ಸಮೂಹವಾಗಿದ್ದು, 60 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳ ಬದುಕಿಗೆ ಆಧಾರವಾಗಿದೆ. ಹಾಗಾಗಿ ನಂದಿನಿಯನ್ನು ಅಮುಲ್ ಜೊತೆ ವಿಲೀನಗೊಳಿಸುವ ರೈತ ವಿರೋಧಿ ನಡೆಯನ್ನು ನಿಲ್ಲಿಸಬೇಕು. ಅಂಬಾನಿಯಂತಹ ದೈತ್ಯ ಕಂಪನಿಯ ದುಷ್ಟ ಯೋಜನೆಗೆ ವೇದಿಕೆ ಸಜ್ಜು ಮಾಡುವ ರೈತರ ಬದುಕಿನ ಜೊತೆ ಚೆಲ್ಲಾಟವಾಡುವ ಕೆಲಸವನ್ನು ಯಾವುದೇ ಸರ್ಕಾರ ಮಾಡಕೂಡದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...