ಏಕಕಾಲದಲ್ಲಿ 4 ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೇ ವಾಟ್ಸಾಪ್‌ ಸಂಖ್ಯೆ ಬಳಸಲು ಅವಕಾಶ!

Date:

Advertisements

ಅತ್ಯಂತ ಜನಪ್ರೀಯ ಮತ್ತು ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಮೆಸೆಜಿಂಗ್‌ ಅ್ಯಪ್‌ ವಾಟ್ಸಪ್‌ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಬರುತ್ತಿದೆ. ಇದೀಗ ʻಮಲ್ಟಿ-ಡಿವೈಸ್ʼ ಹೊಸ ಫೀಚರ್‌ ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

ಒಂದೇ ವಾಟ್ಸಾಪ್‌ ಖಾತೆಯನ್ನು 4 ಮೊಬೈಲ್‌ಗಳಲ್ಲಿ ಏಕಕಾಲದಲ್ಲಿ ಬಳಸಲು ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್  ‘ಇಂದಿನಿಂದ ನೀವು ನಾಲ್ಕು ಫೋನ್‌ಗಳಲ್ಲಿ ಒಂದೇ ವಾಟ್ಸಾಪ್‌ ಖಾತೆಗೆ ಲಾಗಿನ್ ಆಗಬಹುದು’ ಎಂದು ತಿಳಿಸಿದ್ದಾರೆ.

Mark Zuckerberg

ಇದುವರೆಗೂ ಒಂದು ವಾಟ್ಸಾಪ್‌ ಖಾತೆಯನ್ನು ಒಂದು ಫೋನ್ ಜೊತೆಗೆ ಕಂಪ್ಯೂಟರ್‌ನಲ್ಲಿ ಲಾಗಿನ್ ಮಾಡಲು ಮಾತ್ರ ಅವಕಾಶವಿತ್ತು. ಎರಡು ಫೋನ್‌ಗಳಲ್ಲಿ ಏಕಕಾಲದಲ್ಲಿ ಒಂದೇ ಖಾತೆಯನ್ನು ತೆರೆಯಲು ಸಾಧ್ಯವಾಗುತ್ತಿರಲಿಲ್ಲ.

Advertisements

ಲಿಂಕ್ ಮಾಡುವುದು ಹೇಗೆ ?

ವಾಟ್ಸಾಪ್‌ ಅಪ್ಲಿಕೇಶನ್‌ ಡೌನ್‌ಲೋಡ್ ಅಥವಾ ಅಪ್‌ಡೇಟ್ ಮಾಡಿಕೊಳ್ಳಿ. ನಿಮ್ಮ ಎರಡನೇ ಪೋನ್‌ನಲ್ಲಿ ವಾಟ್ಸಾಪ್ ಖಾತೆಗೆ ಫೋನ್ ಸಂಖ್ಯೆಯನ್ನು ನಮೂದಿಸಿ ಲಾಗಿನ್ ಆಗುವ ಅವಶ್ಯಕತೆ ಇಲ್ಲ.

ನಿಮ್ಮ ಮೊದಲ ಪೋನ್‌ನಲ್ಲಿ ವಾಟ್ಶಾಪ್‌ ಖಾತೆಯನ್ನು ತೆರೆದು ಅಪ್ಲಿಕೇಶನ್‌ನ ಮೇಲಿನ ಬಲಭಾಗದಲ್ಲಿರುವ ಮೂರು ಡಾಟ್ ಮೆನುವಿನಲ್ಲಿ ಟ್ಯಾಪ್ ಮಾಡಿ. ಈ ವೇಳೆ ‘link to existing account’ ಎಂಬ ಲಿಂಕ್ ಕಾಣಿಸುತ್ತದೆ. ಇದನ್ನು ಟ್ಯಾಪ್ ಮಾಡಿದರೆ ಕ್ಯೂ ಆರ್ ಕೋಡ್ ತೆರೆಯುತ್ತದೆ. ಇದನ್ನು ನಿಮ್ಮ ಮೊದಲ ಫೋನ್‌ನಲ್ಲಿ ಸ್ಕ್ಯಾನ್ ಮಾಡಿದರೆ ನಿಮ್ಮ ಎರಡನೇ ಫೋನ್‌ನಲ್ಲಿ ನಿಮ್ಮ ವಾಟ್ಸಾಪ್ ಖಾತೆ ತೆರೆಯುತ್ತದೆ. ನೀವು ಕಂಪ್ಯೂಟರ್‌ನಲ್ಲಿ ವೆಬ್‌ನೊಂದಿಗೆ ನಿಮ್ಮ ವಾಟ್ಸಾಪ್ ಖಾತೆಯನ್ನು ಜೋಡಣೆ ಮಾಡಲು ಅನುಸರಿಸುವ ಅದೇ ವಿಧಾನದಲ್ಲಿ ಈ ಹೊಸ ವೈಶಿಷ್ಟ್ಯವು ಸಹ ಕಾರ್ಯನಿರ್ವಹಿಸುತ್ತದೆ ಎನ್ನಲಾಗಿದೆ.

ಈ ಅಪ್‌ಡೇಟ್‌ನೊಂದಿಗೆ, ಒಂದು ವರ್ಷದವರೆಗೆ ಸಂದೇಶಗಳನ್ನು ವಿವಿಧ ಫೋನ್‌ಗಳಲ್ಲಿ ಸಿಂಕ್ ಮಾಡಲಾಗುತ್ತದೆ. ಆದ್ದರಿಂದ, ನಿಮ್ಮ ಒಂದು ಫೋನ್ ಸ್ವಿಚ್ ಆಫ್ ಆಗಿದ್ದರೂ ಸಹ, ಪ್ರತಿ ಫೋನ್ ಪ್ರತ್ಯೇಕವಾಗಿ ಸಂಪರ್ಕಿಸುವುದರಿಂದ ನೀವು ಇತರ ಫೋನ್‌ಗಳಲ್ಲಿ ವಾಟ್ಸಾಪ್‌ ಬಳಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯ ಮೂಲದ ಸಬೀಹ್ ಖಾನ್ ಆ್ಯಪಲ್ ಕಂಪನಿಯ ಸಿಒಒ ಆಗಿ ನೇಮಕ

ದುಬಾರಿ ಬೆಲೆಯ ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ...

ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಡಾಕಿಂಗ್‌ ಯಶಸ್ವಿ: ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿರುವ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಿದ್ದ...

ಸೊಳ್ಳೆ ಗಾತ್ರದ ಮೈಕ್ರೋ ಡ್ರೋನ್‌ಗಳನ್ನು ತಯಾರಿಸಿದ ಚೀನಾ

ಸೊಳ್ಳೆ ಗಾತ್ರದ ಮೈಕ್ರೋ ಡ್ರೋನ್‌ʼಗಳನ್ನು ಚೀನಾದ ವಿಜ್ಞಾನಿಗಳು ತಯಾರಿಸಿದ್ದಾರೆ. ಸೊಳ್ಳೆ ಗಾತ್ರದ...

ಬೆಂಗಳೂರು | ಡಿಜಿಟಲ್ ಅರೆಸ್ಟ್ ಮೂಲಕ ವೃದ್ಧ ದಂಪತಿಗೆ 4.79 ಕೋಟಿ ರೂ. ವಂಚನೆ

ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ಸುಮಾರು 4.79 ಕೋಟಿ ರೂಪಾಯಿ...

Download Eedina App Android / iOS

X