ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

Date:

Advertisements

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿರುವುದು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಂತರ ರೂ.ಗಳ ಹಣವನ್ನು ಲೂಟಿ ಮಾಡಲು ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿರುವುದು ಬೆಳಕಿಗೆ ಬಂದಿದೆ.

ನಕಲಿ ವ್ಯಕ್ತಿಯು 45 ಕೋಟಿ ರೂ ಹಣ ವ್ಯವಹಾರ ಮಾಡಿದ ವಿಚಾರ ಪತ್ತೆಯಾಗುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ

Advertisements

ಲೂಟಿಗಾಗಿ ನಕಲಿ ಹುದ್ದೆ

ಕೋಟ್ಯಂತರ ಹಣ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆಯನ್ನು ಸೃಷ್ಟಿಸಿ ಆ ಹುದ್ದೆಗೆ ಶಿವಕುಮಾರ್‌ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಲಾಗಿತ್ತು.
ಜ್ಯೂನಿಯರ್ ಅಕೌಂಟೆಂಟ್ ಎಂದು ಗುರುತಿನ ಪತ್ರ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ.

ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ತೆರೆಯಲಾಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ.

ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X