ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

“ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದರು.

Advertisements

ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ:

ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ಮಾಹಿತಿ ನೀಡಿದ ಸಚಿವರು, “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ ಅಧಿಕ ಪರವಾನಗಿ ಹೊಂದಿರುವ ಖಾಸಗಿ ಸರ್ವೇಯರ್‌ ಹಾಗೂ 35 ಎ.ಡಿ.ಎಲ್.ಆರ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮುಂದಿನ 3 ರಿಂದ 6 ತಿಂಗಳ ಒಳಗಾಗಿ ಈ ಎಲ್ಲಾ ಹುದ್ದೆಗಳನ್ನೂ ನ್ಯಾಯಸಮ್ಮತವಾಗಿ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಗೆ ಸೂಚಿಸಲಾಗಿ” ಎಂದು ತಿಳಿಸಿದರು.

ಮುಂದುವರೆದು, “ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಸ್ವಾಭಾವಿಕವಾಗಿ ಸರ್ವೇ ಇಲಾಖೆಗೆ ಬಲ ಬರಲಿದೆ. ಈ ಹುದ್ದೆಗಳಲ್ಲದೆ, ಹೆಚ್ಚುವರಿಯಾಗಿ ಹೊಸ ಹುದ್ದೆಗಳ ಸೃಷ್ಟಿಗೂ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದು ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ದವಾಗಿದೆ” ಎಂದರು

ಅರಗ ಜ್ಞಾನೇಂದ್ರರ ಪ್ರಶ್ನೆಗೆ ಸಚಿವರ ಖಡಕ್‌ ಉತ್ತರ

ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸುತ್ತಿದ್ದ ವೇಳೆ ಮದ್ಯಪ್ರವೇಶಿಸಿದ ಬಿಜೆಪಿ ಶಾಸಕ ಮಾಜಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು, “ಮಲೆನಾಡಿನ ರೈತರ ಸಮಸ್ಯೆ ಬೆಂಗಳೂರಿನಿಂದ ತೇರ್ಗಡೆಯಾಗಿ ಹೋದ ಸರ್ವೇಯರ್ಗೆ ಗೊತ್ತಾಗೋದೆ ಇಲ್ಲ. ಇಷ್ಟಕ್ಕೂ ಅವರು ಬೆಂಗಳೂರಿನಿಂದ ಹೊರಟು ಮಲೆನಾಡಿಗೆ ಬಂದು ತಲುಪುವುದರ ಒಳಗಾಗಿ ಡೆಪ್ಯುಟೇಷನ್ ಮೇಲೆ ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಾರೆ ಎಂದು ಆರೋಪಿಸಿದರು.

ಈ ಆರೋಪಕ್ಕೆ ಖಡಕ್ ಆಗಿಯೇ ಉತ್ತರ ಕೊಟ್ಟ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಒಂದು ವರ್ಷದಲ್ಲಿ ನಾನು ವ್ಯಯಕ್ತಿಕವಾಗಿ ಒಂದೇ ಒಂದು ಕೇಸ್ ಕೂಡ ಡೆಪ್ಯುಟೇಶನ್ ಮಾಡಿಲ್ಲ. ಡೆಪ್ಯುಟೇಷನ್ ಎನ್ನುವ ಮಾತೇ ಇಲ್ಲ. ಅಲ್ಲದೆ, ಡೆಪ್ಯಟೇಷನ್ ಮೇಲೆ ಇತರೆಡೆ ಹೋದ ಅಧಿಕಾರಿಗಳನ್ನೂ ಸಹ ಹಿಂದಕ್ಕೆ ವಾಪಸ್ ಕರೆಸಲಾಗಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X