ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ) ಹಾಗೂ ಅಧ್ಯಕ್ಷ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವು ಜುಲೈ 19ರ ಸಂಜೆ 7ಕ್ಕೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ʼಬ್ಯಾರಿ ಭವನ’ದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಸಮಾರಂಭ ಉದ್ಘಾಟಿಸಲಿದ್ದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು. ಹೆಚ್. ಅಧ್ಯಕ್ಷತೆ ವಹಿಸಲಿದ್ದಾರೆ.
ಸಚಿವರಾದ ಶಿವರಾಜ್ ತಂಗಡಗಿ, ಕೆ.ಜೆ. ಜಾರ್ಜ್, ಬಿ.ಝಡ್. ಝಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಎನ್. ಎ. ಹ್ಯಾರಿಸ್, ರಿಝ್ವಾನ್ ಅರ್ಷದ್ ಹಾಗೂ ಮಾಜಿ ಶಾಸಕ ಬಿ.ಎಂ. ಫಾರೂಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ, ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಬೆಂಗಳೂರಿನ ಬ್ಯಾರಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್ ಜಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
