- ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
- ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ
ಬೆಂಗಳೂರಿನ ಜೆ.ಸಿ.ರಸ್ತೆಯ ಭರತ್ ಸರ್ಕಲ್ ಬಳಿಯ ಕಮರ್ಷಿಯಲ್ ಬಿಲ್ಡಿಂಗ್ನ ಲಿಫ್ಟ್ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಕಾಸ್ (26) ಸಾವನ್ನಪ್ಪಿದ ಯುವಕ. ಅವರು ಉತ್ತರಪ್ರದೇಶದಿಂದ ಬೆಂಗಳೂರಿಗೆ ಆರು ತಿಂಗಳ ಹಿಂದೆ ಕೆಲಸಕ್ಕೆ ಬಂದಿದ್ದರು. ಸಂಜಯ್ ಆಟೋಮೋಬೈಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು.
ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ಲಿಫ್ಟ್ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಕಾಸ್ ಸಾವಿನ ಬಗ್ಗೆ ಪೋಷಕರಿಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತನ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮನೊಂದಿಗೆ ಬೈಕ್ ಕದಿಯುತ್ತಿದ್ದ ಯುವತಿ ; ಬಂಧನ
ವೈದ್ಯರ ನಿರ್ಲಕ್ಷಕ್ಕೆ ಬಲಿಯಾದ ಮೂರು ವರ್ಷದ ಮಗು!
ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಸಾವನ್ನಪ್ಪಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಏ.26ರಂದು ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಯಲಹಂಕ ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ, ಆ ಆಸ್ಪತ್ರೆಯ ವೈದ್ಯರು ಸುಮಾರು ಒಂದು ಗಂಟೆಗಳ ಕಾಲ ಮಗುವಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ್ದಾರೆ.
ನಂತರ, ಯಲಹಂಕ ಶುಶ್ರೂಷಾ ಆಸ್ಪತ್ರೆಯಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಮಗುವನ್ನು ದಾಖಲಿಸಿದ್ದಾರೆ. ರಾತ್ರಿ 9 ಗಂಟೆಗೆ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಗುವಿನ ಸಾವಿನ ವಿಚಾರ ತಿಳಿಯುತ್ತಿದ್ದಂತೆ, ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷವೇ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.