ಮುಂಗಾರು ಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಚರ್ಚೆ; ಪ್ರತಿಪಕ್ಷ ನಾಯಕರ ಆರೋಪಕ್ಕೆ ಸಿಎಂ ತಿರುಗೇಟು

Date:

Advertisements

ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, “ನಮ್ಮ ಸರ್ಕಾರ ಬಂದ ಮೇಲೆ ಇಡೀ ದೇಶದಲ್ಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆ ತಂದವರು ನಾವು. ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂತಹ ಪರಿಣಾಮಕಾರಿ ಕಾಯ್ದೆಯನ್ನು ಜಾರಿ ಮಾಡಿದ್ದೇವೆ” ಎಂದರು.

“ಗುತ್ತಿಗೆಯಲ್ಲೂ ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂತಹದನ್ನು ಬಿಜೆಪಿಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ?ಎಸ್‌ಟಿ ಎಸ್‌ಟಿ ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು, ಕೆಐಎಡಿಬಿ ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು” ಎಂದು ಸಮರ್ಥಿಸಿಕೊಂಡರು.

Advertisements

“ನಾವು ಎಸ್‌ಟಿ ಎಸ್ಟಿ ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡಲು ಆಗುತ್ತಿತ್ತಾ? ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ” ಎಂದು ತಿರುಗೇಟು ನೀಡಿದರು.

“ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್‌ಐಟಿ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್‌ಐಟಿ ಬಗ್ಗೆ ಹೀಗೆ ಹೇಳಿದ್ದೀರಾ” ಎಂದು ಪ್ರಶ್ನಿಸಿದರು.

“26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಮಾತಾಡಿದ್ದಾರೆ” ಎಂದು ಹೇಳಿದರು.

“ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಈಗ. ಆರ್. ಅಶೋಕ್ ಮೂರು ಗಂಟೆ ನಾಲ್ಕು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ” ಎಂದರು.

ನಾವು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಪತ್ನಿ ಕೊಟ್ಟ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಶುರು ಮಾಡಿದೆವು. ನಿಗಮದ ಜನರಲ್ ಮ್ಯಾನೇಜರ್ ರಾಜಶೇಖರ್ ಕೊಟ್ಟ ಆರು ಮಂದಿ ವಿರುದ್ದ ನೀಡಿದ ದೂರಿನ ಆಧಾರದಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ವಿವರಿಸಿದರು.

ಬಿಜೆಪಿ ಪ್ರತಿಭಟನೆ

ವಾಲ್ಮೀಕಿ ನಿಗಮ ಹಗರಣದಲ್ಲಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಎಫ್ ಐ ಆರ್ ನಲ್ಲಿ ನಾಗೇಂದ್ರ ಅವರ ಹೆಸರನ್ನು ಸೇರಿಸದಿರುವುದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ, ಎಫ್ ಐ ಆರ್ ನಲ್ಲಿರುವ ಅಂಶಗಳನ್ನು ಪೂರ್ತಿ ಏಕೆ ಓದುತ್ತಿಲ್ಲ ಹಾಗೂ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಆಗಿರುವ ಎಫ್ ಐ ಆರ್ ನಲ್ಲಿ ಸಚಿವರಾಗಿದ್ದ ಬಿ ನಾಗೇಂದ್ರ ಹೆಸರು ಏಕಿಲ್ಲ? ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದರು. ಈ ವೇಳೆ ಸದನದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ದಾದ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X