ಗುಡ್ಡ ಕುಸಿಯುವ ಭೀತಿ : ಇಂದಿನಿಂದ ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

Date:

Advertisements

ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಆದೇಶ ಹೊರಡಿಸಿದ್ದಾರೆ.

ಮಂಗಳೂರು – ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು. ಇಂದು(ಜುಲೈ 18) ರಾತ್ರಿ 8 ಗಂಟೆಯಿಂದ ಜುಲೈ 22 ರ ಬೆಳಗ್ಗೆ 6 ಗಂಟೆವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

Advertisements

ರಾತ್ರಿ ವೇಳೆಯ ರಸ್ತೆ ಸಂಚಾರಕ್ಕೆ ನಿಷೇಧ ಹೇರುವಂತೆ ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯಲ್ಲಿ, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿರುವ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅತಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ಇರುತ್ತದೆ. ಹವಾಮಾನ ಇಲಾಖೆಯ ವರದಿಯಂತೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಎಂಬ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ಸೂಚಿಸಿದ್ದರು. ಹೀಗಾಗಿ, ನಿರ್ಬಂಧಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಕೊಡಗು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X