ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ: ವರದಿ

Date:

Advertisements

ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉದಯನಿಧಿ ಸ್ಟಾಲಿನ್‌ ತಂದೆ ಎಂ ಕೆ ಸ್ಟಾಲಿನ್ ಕೂಡ 2009ರ ಲೋಕಸಭಾ ಚುನಾವಣೆಯ ನಂತರ ಅವರ ತಂದೆ ಎಂ ಕೆ ಕರುಣಾನಿಧಿ ಸಂಪುಟದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆದಿದ್ದರು.

ಚೆಪಕ್ ಕ್ಷೇತ್ರದ ಶಾಸಕರಾದ ಉದಯನಿಧಿ 2022ರ ಡಿಸೆಂಬರ್‌ನಲ್ಲಿ ಡಿಎಂಕೆ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಮೂಲಗಳ ಪ್ರಕಾರ, ಉದಯನಿಧಿ ಸ್ಟಾಲಿನ್‌ ಇದೇ ವರ್ಷದ ಆರಂಭದಲ್ಲಿಯೇ ಡಿಸಿಎಂ ಆಗಿ ನೇಮಕಗೊಳ್ಳುವ ಸಾಧ್ಯತೆಯಿತ್ತು. ಆದರೆ ಒಂದೇ ಅವಧಿಯಲ್ಲಿ ಎರಡು ಬಾರಿ ಮಂತ್ರಿಯಾದರೆ ಪಕ್ಷದಲ್ಲಿ ಆಂತರಿಕ ಕಲಹ ಏರ್ಪಡುವ ಕಾರಣದಿಂದ ಯೋಜನೆಯನ್ನು ಕೈ ಬಿಡಲಾಯಿತು ಎಂದು ತಿಳಿದುಬಂದಿದೆ.

ಈ ವರ್ಷದ ಜನವರಿಯಲ್ಲಿ ಸನಾತನ ಧರ್ಮದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದ ಉಂಟಾಗಿತ್ತು. ಈ ಬೆಳವಣಿಗೆಯ ನಂತರ ಕಲ್ಲಕುರುಚಿಯ ಅಕ್ರಮ ಮದ್ಯ ದುರಂತ ಕೂಡ ಉದಯನಿಧಿ ಸ್ಟಾಲಿನ್‌ ಡಿಸಿಎಂ ಆಗಲು ಅಡ್ಡಿಯಾಯಿತು ಎಂದು ವರದಿಯಾಗಿದೆ.

ಸನಾತನ ಧರ್ಮದ ವಿರುದ್ಧವಾದ ಹೇಳಿಕೆ ರಾಷ್ಟ್ರಮಟ್ಟದಲ್ಲಿ ವಿವಾದ ಉಂಟು ಮಾಡಿದರೆ, ಕಲ್ಲಕುರುಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವನೆಯಿಂದ 65 ಮಂದಿ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X