ಶ್ರೀಲಂಕಾ ವಿರುದ್ಧ ಜುಲೈ 27ರಿಂದ ಆರಂಭಗೊಳ್ಳುವ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ತಂಡದ ನಾಯಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಹಾರ್ದಿಕ್ ಪಾಂಡ್ಯ ನಾಯಕರಾಗುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆಬಿದ್ದಿದೆ.
ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ನಾಯಕರಾಗಿ 7 ಪಂದ್ಯಗಳನ್ನು ಮುನ್ನಡೆಸಿದ್ದಾರೆ. ಭಾರತ ತಂಡದಲ್ಲಿ ಶುಭಮನ್ ಗಿಲ್‌ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ತಂಡಕ್ಕೆ ಕೆ ಎಲ್ ರಾಹುಲ್ ಹಿಂತಿರುಗಿದ್ದಾರೆ.
ಜುಲೈ 27ರಿಂದ ಆರಂಭಗೊಳ್ಳುವ ಟಿ20 ಸರಣಿ ಆಗಸ್ಟ್ 2ರವರೆಗೂ ನಡೆಯಲಿದೆ.
ಟಿ20 ಸರಣಿಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ , ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ ಕೆ ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್(ವಿಕೆಟ್ ಕೀಪರ್),ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್‌ದೀಪ್ ಯಾದವ್, ಮೊಹಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ
