ಅಮೆರಿಕ | ಚುನಾವಣೆಯಿಂದ ಹಿಂದೆ ಸರಿಯಿರಿ; ಜೋ ಬೈಡನ್‌ಗೆ ಒಬಾಮಾ ಸೇರಿ ಪ್ರಮುಖ ನಾಯಕರ ಒತ್ತಾಯ

Date:

Advertisements

ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಸೇರಿದಂತೆ ಡೆಮಾಕ್ರೆಟಿಕ್‌ ಪಕ್ಷದ ಹಲವು ಪ್ರಮುಖ ನಾಯಕರು ಒತ್ತಾಯಿಸಿದ್ದಾರೆ.

ಡೆಮಾಕ್ರೆಟಿಕ್‌ ಪಕ್ಷದ ನಾಯಕರು ಹಾಗೂ ಅಮೆರಿಕದ ಮಾಜಿ ಅಧ್ಯಕ್ಷರಾದ ಬರಾಕ್‌ ಒಬಾಮಾ ಜೋ ಬೈಡನ್‌ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವಂತೆ ಖಾಸಗಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಅಮೆರಿಕದ ಸ್ಪೀಕರ್‌ ಆದ ಎಮಿರಿಟಾ ನಾನ್ಸಿ ಪೆಲೋಸಿ ಕೂಡ ಒಂದು ವೇಳೆ ಜೋ ಬೈಡನ್‌ ಕಣದಿಂದ ಹಿಂದೆ ಸರಿಯದಿದ್ದರೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.

Advertisements

ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಅವರನ್ನು ಬೈಡನ್‌ ಸೋಲಿಸಲು ಸಾಧ್ಯವಿಲ್ಲ ಎಂದು ಪೆಲೋಸಿ ಅವರು ತಿಳಿಸಿದ್ದಾರೆ.

ಚುನಾವಣಾ ಕಣದಲ್ಲಿರುವ ಈ ಸಂದರ್ಭದಲ್ಲಿ ಬೈಡನ್‌ ಅವರು ತಮ್ಮ ಸ್ಪರ್ಧೆಯನ್ನು ಮರು ಪರಿಶೀಲಿಸುವಂತೆ ಹಾಗೂ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಡೆಮಾಕ್ರೆಟಿಕ್‌ ಪಕ್ಷದ ನಾಯಕರು ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಮುಂದುವರಿಯುತ್ತಿರುವುದಕ್ಕೆ ಸ್ವಪಕ್ಷೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಕೆಲವು ವರದಿಗಳಂತೆ ಉನ್ನತ ಡೆಮಾಕ್ರೆಟಿಕ್‌ ಪಕ್ಷದ ನಾಯಕರ ಒತ್ತಾಯದಂತೆ 81 ವರ್ಷದ ಅಧ್ಯಕ್ಷ ಜೋ ಬೈಡನ್ ಅವರು ಕೆಲವು ದಿನಗಳಲ್ಲಿ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯಲಿದ್ದಾರೆ ಎನ್ನಲಾಗುತ್ತದೆ.

ಈ ನಡುವೆ ಚುನಾವಣಾ ಪ್ರಚಾರ ಹಾಗೂ ಚರ್ಚೆಗಳಲ್ಲಿ ಬೈಡನ್‌ ಅವರು ಪ್ರದರ್ಶನ ನಿರಾಶದಾಯಕವಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. ಕೆಲವು ಮಾಧ್ಯಮಗಳ ಸಮೀಕ್ಷೆ ಪ್ರಕಾರ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಮುಂದಿದ್ದಾರೆ.

ಒಂದು ವೇಳೆ ಜೋ ಬೈಡನ್‌ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದರೆ ಉಪಾಧ್ಯಕ್ಷರಾದ ಕಮಲ ಹ್ಯಾರಿಸ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು.

ಈ ನಡುವೆ ಲಾಸ್ ವೇಗಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಅಧ್ಯಕ್ಷ ಜೋ ಬಿಡನ್ ಅವರಿಗೆ ಕೋವಿಡ್ 19 ಸೋಂಕು ತಗುಲಿದೆ. ಬೈಡನ್ ಈ ಹಿಂದೆ​ ಬೂಸ್ಟರ್‌ ಡೋಸ್‌ಗಳನ್ನು ಒಳಗೊಂಡು ಎಲ್ಲ ಲಸಿಕೆಗಳನ್ನು ಹಾಕಿಸಿಕೊಂಡಿದ್ದರು.

ಇದಾದ ಬಳಿಕವೂ ಅವರಿಗೆ ಕೊರೊನಾ ಸೋಂಕು ತಗುಲಿದೆ. ಜೋ ಬಿಡೆನ್ ಅವರು ಜುಲೈ 2022 ರಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಆಗ ಕ್ರಮೇಣವಾಗಿ ಒಂದೊಂದೇ ಕೋವಿಡ್ ಲಕ್ಷಣಗಳು ಕಂಡುಬಂದವು. ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿಯೇ ಎರಡನೇ ಬಾರಿಗೆ ತನ್ನನ್ನು ತಾನೇ ಪ್ರತ್ಯೇಕಿಸಿಕೊಳ್ಳಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X