ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್ನ ವೆಂಕಟ ಭೀಮರಾಯ ಮಂಗಳೂರು (20) ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ
ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಔತಣಕೂಟ ಮಾಡಿದ್ದಾರೆ. ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಚಲಿಸಿದ ಪರಿಣಾಮ ಯುವಕರು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್ಗಳಿದ್ದು ಸ್ಥಳಕ್ಕೆ ರೈಲ್ವೆ ಇಲಾಖೆಯ ಪಿಎಸ್ಐ ಬಿ ಎನ್ ರಾಮಣ್ಣ ನೇತೃತ್ವದ ರೈಲ್ವೆ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.