ಚಿಕ್ಕಮಗಳೂರು ಪ್ರವಾಹ : ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ

Date:

Advertisements
  • ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಿಕ್ಕಮಗಳೂರಿನ ಪ್ರವಾಹ ಪರಿಸ್ಥಿತಿ ಕುರಿತು ಸಮಾಲೋಚನೆ
  • ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಉಸ್ತುವಾರಿ ಸಚಿವರ ನಿರ್ದೇಶನ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ, ಸಕಲ ರೀತಿಯಲ್ಲಿ ಸನ್ನದ್ಧರಾಗುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ತಡರಾತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಸಚಿವರು, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂತ್ರಸ್ತರಿಗೆ ತ್ವರಿತ ಪರಿಹಾರ ಒದಗಿಸುವ ಬಗ್ಗೆ ಸಲಹೆ ನೀಡಿದರು.

“ಜಿಲ್ಲೆಯ ಜನರ ಸುರಕ್ಷತೆಗೆ ಒತ್ತು ನೀಡುವಂತೆ ನಿರ್ದೇಶಿಸಿದ ಸಚಿವರು, ಪ್ರವಾಹದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಬೇಕು” ಎಂದರು.

Advertisements

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ ಸಿ.ಎನ್, ಜಿಲ್ಲಾ ಪಂಚಾಯತ್ ಸಿಇಓ ಶ್ರೀಮತಿ ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ, ಪ್ರವಾಹದಿಂದ ಉಂಟಾಗಿರುವ ಹಾನಿಯ ಪ್ರಮಾಣ ಮತ್ತು ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸ್ಥಿತಿಯನ್ನು ವಿವರಿಸಿದರು. ಜಿಲ್ಲಾಡಳಿತ, ಪರಿಹಾರ ತಂಡಗಳು ಮತ್ತು ಸ್ವಯಂಸೇವಕರ ಅವಿರತ ಪ್ರಯತ್ನಗಳಿಗೆ ಸಚಿವ ಕೆ.ಜೆ.ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಜಾರ್ಜ್, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. “ಸರ್ಕಾರದ ಕಡೆಯಿಂದ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು. ಅಧಿಕಾರಿಗಳು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X