ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

Advertisements

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘೀ ಬಗ್ಗೆ ಜಾಗೃತಿ ಮೂಡಿಸಿದರು.

ಈಡಿಸ್ ಲಾರ್ವಾ ನಾಶಪಡಿಸುವ ದಿನದಂದು ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ, ಬೆಂಗಳೂರಿನ ವಾರ್ಡ್‌ಗಳಲ್ಲಿ ಲಾರ್ವಾ ನಾಶಪಡಿಸುವ ಔಷಧಿ ಸಿಂಪಡಿಸಿದರು.

ಬೆಂಗಳೂರಿನ ರಾಮಸ್ವಾಮಿ ಪಾಳ್ಯದಲ್ಲಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದ ಬಳಿಕ, ಕಾಲೋನಿಗಳಲ್ಲಿ ಪರಿಶೀಲನೆ ನಡೆಸಿದ ಸಚಿವರು, ನೀರು ಶೇಖರಣೆ ಮಾಡದಂತೆ ನಿವಾಸಿಗಳಿಗೆ ತಿಳುವಳಿಕೆ ಮೂಡಿಸಿದರು.

Advertisements

ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಸಚಿವ ಗುಂಡೂರಾವ್, “ಡೆಂಘೀ ರೋಗ ಬಾರದಂತೆ ಜಾಗರೂಕತೆ ವಹಿಸಬೇಕು. ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರ ವಹಿಸಿದರೆ ಮಾತ್ರ ಡೆಂಘೀ ನಿಯಂತ್ರಣ ಮಾಡಬಹುದು” ಎಂದು ತಿಳಿಸಿದರು.

ಆ ಬಳಿಕ ವಸಂತ ನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಮಕ್ಕಳಲ್ಲಿ ಡೆಂಘೀ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಡೆಂಘೀ ಹರಡುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದರು.

ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ತಾಣಗಳ ಬಗ್ಗೆ ವಿದ್ಯಾರ್ಥಿಗಳಿಗಳೊಂದಿಗೆ ಸಂಭಾಷಣೆ ನಡೆಸಿದ ಸಚಿವರು, ನೀರು ಹೆಚ್ಚು ದಿನ ಸಂಗ್ರಹವಾಗದಂತೆ, ನಿಮ್ಮ ನಿಮ್ಮ ಮನೆಗಳಲ್ಲಿ ನೀವೇ ಎಚ್ಚರಿಕೆ ವಹಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.‌ ಇದೇ ವೇಳೆ ಶಾಲಾ ಮಕ್ಕಳಿಗೆ ರಕ್ಷಣಾ ಕ್ರೀಮ್‌ಗಳ ವಿತರಣೆ ಮಾಡಿದರು.

ಆ ಬಳಿಕ ವಸಂತನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆರೋಗ್ಯ ಸಚಿವರಿಗೆ ಶಿವಾಜಿನಗರ ವಿಧಾನಸಭಾ ಕೇತ್ರದ ಶಾಸಕ ರಿಝ್ವಾನ್ ಹರ್ಷದ್ ಸಾಥ್ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X