ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರಿ ಪಾಲಿನ ಕಡಿತವನ್ನು ಸಹಿಸುವುದಿಲ್ಲ: ಕಾಂಗ್ರೆಸ್

Date:

Advertisements

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನವನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ದೃಢವಾಗಿ ವಿರೋಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ.

ಕಳೆದ ಏಳು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಉದ್ಯಮದಲ್ಲಿ ವಿಲೀನ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಅದಕ್ಕೆ ಅವಕಾಶ ದೊರೆತಿರುವುದು ಕೇಂದ್ರ ಸರ್ಕಾರದ ಪಾಲು ಬ್ಯಾಂಕ್‌ಗಳಲ್ಲಿ ಶೇ.51ಕ್ಕಿಂತ ಹೆಚ್ಚಿರುವುದು ಎಂದು ಕಾಂಗ್ರೆಸ್‌ ಒತ್ತಿ ಹೇಳಿದೆ.

“55 ವರ್ಷಗಳ ಇದೇ ಜುಲೈ 19ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದರು. 14 ಬ್ಯಾಂಕ್‌ಗಳನ್ನು ಸರ್ಕಾರದ ಅಡಿಗೆ ತಂದಿದ್ದರು. ಭಾರತದ ಆರ್ಥಿಕ ಇತಿಹಾಸದಲ್ಲಿ ಮಹತ್ವದ ಅಧ್ಯಾಯವನ್ನು ಸ್ಥಾಪಿಸಿದ್ದರು” ಎಂದು ಕಾಂಗ್ರೆಸ್‌ನ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಮರಿಸಿದ್ದಾರೆ.

Advertisements

ಬ್ಯಾಂಕ್ ರಾಷ್ಟ್ರೀಕರಣವು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕತೆಯ ಇತರ ಆದ್ಯತೆಯ ಕ್ಷೇತ್ರಗಳಿಗೆ ಸಾಲ ನೀಡುವಿಕೆಗೆ ಹೆಚ್ಚಿನ ಮಹತ್ವ ನೀಡಿದೆ. ಆ ಕ್ಷೇತ್ರಗಳಲ್ಲಿ ಪರಿಣಾಮಗಾರಿ ಬೆಳವಣಿಗೆಗೆ ಸಹಾಯವಾಗಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳು ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿವೆ” ಎಂದು ರಮೇಶ್ ತಿಳಿಸಿದ್ದಾರೆ.

“ಕಳೆದ ಏಳು ವರ್ಷಗಳಲ್ಲಿ, ಸಾರ್ವಜನಿಕ ವಲಯದ ಬ್ಯಾಂಕಿಂಗ್ ಉದ್ಯಮದಲ್ಲಿ ಹಲವಾರು ವಿಲೀನಗಳು ನಡೆದಿವೆ. ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ – ಪಂಜಾಬ್ ನ್ಯಾಷನಲ್ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿವೆ; ಸಿಂಡಿಕೇಟ್ ಬ್ಯಾಂಕ್ – ಕೆನರಾ ಬ್ಯಾಂಕ್ ಜೊತೆ ವಿಲೀನಗೊಂಡಿದೆ; ಅಲಹಾಬಾದ್ ಬ್ಯಾಂಕ್ – ಇಂಡಿಯನ್ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿದೆ; ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್‌ ವಿಲೀನವಾಗಿವೆ; ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ಗಳು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನಗೊಂಡಿದೆ; ಹೆಚ್ಚುವರಿಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ, ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಭಾರತೀಯ ಮಹಿಳಾ ಬ್ಯಾಂಕ್ಅನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ವಿಲೀನಗೊಳಿಸಲಾಗಿದೆ” ಎಂದು ವಿವರಿಸಿದ್ದಾರೆ.

“ಈ ವಿಲೀನಗಳು ತಮ್ಮದೇ ಆದ ಸವಾಲುಗಳನ್ನು ಕೂಡ ಎದುರಿಸಿವೆ. ದೊಡ್ಡ ಬ್ಯಾಂಕ್‌ ಯಾವಾಗಲೂ ಉತ್ತಮವಾಗಿರುತ್ತದೆ ಎಂದಲ್ಲ. ಆದರೆ, ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಕೇಂದ್ರ ಸರ್ಕಾರದ ಪಾಲು 51%ಕ್ಕಿಂತ ಕಡಿಮೆ ಇರಬಾರದು ಎಂಬ ಕಾರಣಕ್ಕಾಗಿ ಆ ವಿಲೀನಗಳನ್ನು ಒಪ್ಪಿಕೊಳ್ಳಲಾಗಿದೆ” ಎಂದು ರಮೇಶ್ ಹೇಳಿದ್ದಾರೆ.

“ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲು 51%ಕ್ಕಿಂತ ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ಸಂಸತ್ತಿನಲ್ಲಿ ಮತ್ತು ಹೊರಗೆ ಬಲವಾಗಿ ಪಕ್ಷವು ವಿರೋಧಿಸುತ್ತದೆ” ಎಂದು ರಮೇಶ್ ಪ್ರತಿಪಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X