ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕನ್ನಂಬಾಡಿ ಕಟ್ಟೆ ತುಂಬುವ ಕ್ಷಣಗಣನೆ ಆರಂಭವಾಗಿದೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬರುತ್ತಿರುವ ಹೆಚ್ಚಿನ ಒಳಹರಿವಿನ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ.
ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ- ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿದ್ದಾರೆ.
ಕೆ.ಆರ್.ಎಸ್ ಅಣೆಕಟ್ಟೆ ನೀರಿನ ಮಟ್ಟ
(ಜು.19ರ ಮಧ್ಯಾಹ್ನ 3 ಗಂಟೆ ವೇಳೆಗೆ
ಅಣೆಕಟ್ಟೆಯ ಗರಿಷ್ಠ ಮಟ್ಟ : 124.80 ಅಡಿ
ಇಂದಿನ ನೀರಿನ ಮಟ್ಟ: 117.60 ಅಡಿ
• ಗರಿಷ್ಠ ಸಾಮರ್ಥ್ಯ : 49.452 ಟಿಎಂಸಿ
• ಪ್ರಸ್ತುತ ನೀರಿನ ಸಂಗ್ರಹ: 39.608 ಟಿಎಂಸಿ
• ಒಳಹರಿವು: 45091 ಕ್ಯೂಸೆಕ್
• ಹೊರ ಹರಿವು: 2671 ಕ್ಯೂಸೆಕ್
ರಂಗನತಿಟ್ಟಿನಲ್ಲಿ ದೋಣಿ ವಿಹಾರ ಸ್ಥಗಿತ
ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಯಾವ ಕ್ಷಣದಲ್ಲಾದರೂ ಕನ್ನಂಬಾಡಿ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಆಗಿರುವುದರಿಂದ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾಹವನ್ನು ಸ್ಥಗಿತಗೊಳಿಸಲಾಗಿದೆ.
ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ದೋಣಿ ವಿಹಾರವು ಅಪಾಯಕಾರಿ ಆಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿದೆ ದೋಣಿ ವಿಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೈಸೂರು ಉಪ ವಿಭಾಗದ ಅರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
