ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದಂತೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮಾತುಕತೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ.
ಇದನ್ನು ಓದಿದ್ದೀರಾ? ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ; 32 ಸಾವು
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇದು ಬಾಂಗ್ಲಾದೇಶದ ಆಂತರಿಕ ವಿಷಯ” ಎಂದು ಹೇಳಿದ್ದಾರೆ. ಇನ್ನು 8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯರು ಬಾಂಗ್ಲಾದೇಶದಲ್ಲಿ ನೆಲೆಸಿದ್ದು ಅವರೆಲ್ಲವರೂ ಸುರಕ್ಷಿತವಾಗಿದ್ದಾರೆ. 125 ವಿದ್ಯಾರ್ಥಿಗಳು ಸೇರಿದಂತೆ 245 ಭಾರತೀಯ ನಾಗರಿಕರು ಭಾರತಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವಿದ್ಯಾರ್ಥಿ ಪ್ರತಿಭಟನಾಕಾರರು ಕೇಂದ್ರ ಬಾಂಗ್ಲಾದೇಶದ ನರಸಿಂಗಡಿ ಜಿಲ್ಲೆಯ ಜೈಲಿಗೆ ನುಗ್ಗಿ ಬೆಂಕಿ ಹಚ್ಚಿದ ಕಾರಣ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎಫ್‌ಪಿಗೆ ತಿಳಿಸಿದ್ದಾರೆ. “ನನಗೆ ಕೈದಿಗಳ ಸಂಖ್ಯೆ ತಿಳಿದಿಲ್ಲ, ಆದರೆ ಅದು ನೂರಾರು ಕೈದಿಗಳಿರುತ್ತಾರೆ” ಎಂದು ಹೇಳಿದರು.
1971ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಜನರ ಕುಟುಂಬಗಳಿಗೆ ಶೇಕಡ 30ರಷ್ಟು ಸರ್ಕಾರಿ ಉದ್ಯೋಗ ಮೀಸಲಾತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
Condition in Bangladesh going from worst to Disaster
The way Govt is handling these protests, is also one of the reason for Violence 👊😡👊#Bangladesh #Reservation #HasinaOut pic.twitter.com/uQVuDtIffI
— Veena Jain (@DrJain21) July 20, 2024
BREAKING 🚨 :
“Violence in Bangladesh over a Reservation Bill”-Death of 105 people
-Curfew imposed across the country.
-Army called to control the riots
-More than 400 Indian students returned to India
pic.twitter.com/v3NegtB9IP— Avi🍁 (@avitrends) July 20, 2024