ಯಾದಗಿರಿ | ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಲ್ಲ: ಸ್ಯಾಮ್‌ಸನ್ ಬಂಟು

Date:

Advertisements

ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಪಿಎನ್ಎಸ್ಎಫ್ಎ ಮತ್ತು HOSh (hope to shine) ಅನುಷ್ಠಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಮಕ್ಕಳು ಬಡತನದಿಂದ ವಿದ್ಯಾಭ್ಯಾಸ ವಂಚಿತರಾಗಲು ಸಾಧ್ಯವಿಲ್ಲ. ಮಕ್ಕಳಿಗೆ ಓದುವ ಆಸಕ್ತಿ ಇರಬೇಕು. ಸರಕಾರವು ಅನೇಕ ಸೌಲಭ್ಯಗಳು ಒದಗಿಸುತ್ತಿದ್ದು ವರ್ಲ್ಡ್ ವಿಷನ್ ಸಂಸ್ಥೆ ಮಕ್ಕಳ ವಿಕಾಸಕ್ಕೋಸ್ಕರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ” ಎಂದರು.

Advertisements

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ ಕರಡಿ ಮಾತನಾಡಿ, ಮಕ್ಕಳಿಗೆ 14 ವರ್ಷದವರೆಗೆ ಅವರಿಗೆ ಕೊಡಬೇಕಾದ ಎಲ್ಲ ಸೌಲಭ್ಯ, ಮಕ್ಕಳ ಹಕ್ಕುಗಳನ್ನು ಪೂರೈಸಬೇಕು. ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದೆ ಇದ್ದರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಜೀವಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಯಾದಗಿರಿ 22

ಯಾದಗಿರಿ ಜಿಲ್ಲಾ ಮಕ್ಕಳ ಯೋಜನಾಧಿಕಾರಿ ಪ್ರೇಮ್ ಮೂರ್ತಿ ಮಾತನಾಡಿ, ಮಕ್ಕಳಿಗೆ ಎಲ್ಲ ರೀತಿಯ ಸೌಲಭ್ಯಗಳು ಒದಗಿಸುವುದು ಹಾಗೂ ಮಕ್ಕಳ ಆರೈಕೆಯಲ್ಲಿ ಪಾಲಕರ ಕರ್ತವ್ಯ ಹಾಗೂ ಶಿಕ್ಷಕರ ಕರ್ತವ್ಯಗಳ ಬಗ್ಗೆ ತಿಳಿಸಿದರು.

ಮಕ್ಕಳ ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ಮಾತನಾಡಿ, ಬಾಲಕಾರ್ಮಿಕ ಮಕ್ಕಳನ್ನು ಶಾಲೆಗೆ ಬರುವಂತೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಎಲ್ಲ ಮಗು ಶಿಕ್ಷಣವನ್ನು ಪಡೆದುಕೊಳ್ಳುವುದು ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಕಲಚೇತನ ಮಕ್ಕಳಿಗೆ 6 ವೀಲ್ ಚೇರ್ ಹಾಗೂ ಅಂಗನವಾಡಿ ಮಕ್ಕಳಿಗೆ 350 ಟಿಫನ್ ಬಾಕ್ಸ್, ಪ್ರೌಢ ಶಾಲಾ ಮಕ್ಕಳಿಗೆ 220 ಹೈಜೀನ್ ಕಿಟ್, 10ನೇ ತರಗತಿ ಮಕ್ಕಳಿಗೆ ನೋಟ್ ಬುಕ್ ವಿತರಣೆ ಹಾಗೂ ಜನನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿ.ಬಿ.ರಾಜೇಶ್ವರಿ ವಹಿಸಿದ್ದರು. ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಅನಿಲ್ ತೇಜಪ್ಪ, ತಾಲೂಕು ಆರೋಗ್ಯಾಧಿಕಾರಿ ರಮೇಶ್ ಗುತ್ತೇದಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬಲಮ್ಮ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶಕೀನಾಬಿ, ಮೇಲ್ವಿಚಾರಕಿ ಅಂಜುಮ್ ಬೇಗಂ, ನಾಗಪ್ಪ, ಗ್ರಾಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರಣಪ್ಪ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಲ್ಲಣ್ಣ ಹುಲಿಕಲ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಬು ಸೇರಿದಂತೆ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X