ಅಬಕಾರಿ ನೀತಿ ಹಗರಣದ ಆರೋಪದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದೊಂದಿಗೆ ಬಿಜೆಪಿ ಆಟವಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “ಅರವಿಂದ್ ಕೇಜ್ರಿವಾಲ್ ಅವರ ವೈದ್ಯಕೀಯ ವರದಿಯು ಅವರಿಗೆ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳುತ್ತದೆ. ಆದರೆ ಬಿಜೆಪಿಯವರು ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಚೆಲ್ಲಾಟವಾಡುತ್ತಿದ್ದಾರೆ. ಕೇಜ್ರಿವಾಲ್ ಹತ್ಯೆಗೆ ಸಂಚು ನಡೆಯುತ್ತಿದೆ” ಎಂದು ದೂರಿದರು.
“ಆರಂಭದಲ್ಲಿ ಕೇಜ್ರಿವಾಲ್ ಅವರು ಸಿಹಿ ತಿಂದು ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿಗರು ಹೇಳುತ್ತಿದ್ದರು. ಆದರೆ ಈಗ ಕೇಜ್ರಿವಾಲ್ ತನ್ನ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಯಾರಾದರೂ ತಮ್ಮ ಸ್ವಂತ ಜೀವಕ್ಕೆ ಯಾಕೆ ಆಪತ್ತು ತರುತ್ತಾರೆ” ಎಂದು ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, “ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ. ಅವರಿಗೆ ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ವಿಕೆ ಸಕ್ಸೇನಾ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್‌ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಕ್ಸೇನಾ ಅವರು ಕೇಜ್ರಿವಾಲ್ ಅವರ ಆರೋಗ್ಯದ ಕುರಿತು ಉಲ್ಲೇಖ ಮಾಡಿದ್ದಾರೆ. “ಮುಖ್ಯಮಂತ್ರಿ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರ ಸಾಕಷ್ಟು ಲಭ್ಯವಿದ್ದರೂ ಕೂಡಾ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೊರಿಗಳನ್ನು ಸೇವಿಸಿದ್ದಾರೆ” ಎಂದು ದೂರಿದ್ದಾರೆ.
#WATCH | AAP MP Sanjay Singh says “Today’s press conference is about how BJP and Delhi LG are playing with the life of Delhi CM Arvind Kejriwal and conspiring to kill him in jail…The medical report of Arvind Kejriwal is enough to tell that anything can happen to him at any time… pic.twitter.com/DqJbThKcap
— ANI (@ANI) July 21, 2024