ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ನಾಗನಾಥ ಕೃಷ್ಣಾಜಿ (50) ಮೃತರು, ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಹಾಗೂ ತಗಡಿನ ಶೀಟ್ ತೇವಾಂಶಗೊಂಡಿದೆ. ಹೀಗಾಗಿ ಮನೆಯ ಮೇಲೆ ಹಾದು ಹೋದ ತಂತಿಗೆ ತಗಡಿನ ಶೀಟ್ ಸಿಲುಕಿದ ಪರಿಣಾಮ ವಿದ್ಯುತ್ ಪ್ರವಹಿಸಿದೆ.
ಭಾನುವಾರ ಬೆಳಿಗ್ಗೆ ಮನೆ ಮೇಲಿನ ತಗಡಿನ ಶೀಟ್ಗೆ ಮುಟ್ಟಿದಾಗ ವಿದ್ಯುತ್ ಸ್ಪರ್ಶಿಸಿದೆ, ಪರಿಣಾಮ ನಾಗನಾಥ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇವರನ್ನು ರಕ್ಷಿಸಲು ಹೋದ ಸಹೋದರ ಸೋಮನಾಥ ಎನ್ನುವರಿಗೆ ಗಾಯಗೊಂಡಿದ್ದು ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಂಠಾಳ ಠಾಣೆ ಪೊಲೀಸರು ಹಾಗೂ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.