ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ತಮಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿಸಿದ್ದಾರೆ.
ಗುರ್ಪತ್‌ವಂತ್ ಸಿಂಗ್ ಪನ್ನುನ್ ನೇತೃತ್ವದ ಸಂಘಟನೆಯು ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಸಂದೇಶದೊಂದಿಗೆ ಭಾರತೀಯ ಸಂಸತ್ತಿನಿಂದ ಕೆಂಪು ಕೋಟೆ ಪ್ರದೇಶದವರೆಗೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶಿವದಾಸನ್ ಅವರು ಧನಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದ ಲಾಂಜ್‌ನಲ್ಲಿರುವಾಗ ರಾಜ್ಯಸಭಾ ಸಂಸದರಿಗೆ ಕರೆ ಬಂದಿದೆ. ಕೆಲವೇ ನಿಮಿಷಗಳ ಹಿಂದೆ ಸಂಸದ ಎಎ ರಹೀಮ್ ಅವರಿಗೂ ಕರೆ ಬಂದಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?
ಶಿವದಾಸನ್ ಅವರು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಜುಲೈ 23 ರಂದು ಬಜೆಟ್ ಮಂಡಿಸುವುದರೊಂದಿಗೆ ಆಗಸ್ಟ್ 12 ರವರೆಗೆ ನಡೆಯಲಿದೆ.
ಈ ನಡುವೆ ಅಧಿವೇಶನದಲ್ಲಿ ನೀಟ್–ಯುಜಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕನ್ವರ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.