ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

Date:

Advertisements

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುವುದು ಎಂದು ಕೆ ದುರುಗಣ್ಣ ಹೇಳಿದರು.

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಗ್ರಾ ಪಂ ಕಚೇರಿಯಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“12ನೇ ಶತಮಾನದಲ್ಲಿ ಬಸವಣ್ಣನವರ ಸಮಾನಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರು ಕಾಯಕಕ್ಕೆ ಹೆಚ್ಚು ಮಹತ್ವ ಕೊಟ್ಟಿದ್ದರು. ಬಸವಣ್ಣನವರು ಶರಣ ಹಡಪದ ಅಪ್ಪಣ್ಣನವರಿಗೆ ನಿಜಸುಖಿ ಎಂದು ಕರೆಯುತ್ತಿದ್ದರು. ಅಪ್ಪಣ್ಣನವರು ಅಂಗೈಯಲ್ಲಿ ಲಿಂಗವನ್ನಿಟ್ಟುಕೊಂಡು ಲಿಂಗವನ್ನು ನೋಡಿ, ಅದರಲ್ಲಿಯೇ ಮಗ್ನರಾಗಿರುತ್ತಿದ್ದರು. ಅಲ್ಲದೇ ಅಪ್ಪಣ್ಣನವರು ಬಸಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದರು” ಎಂದು ತಿಳಿಸಿದರು.

Advertisements

“ನುಡಿದಂತೆ ನಡೆದ ಅವರು ನಾಡಿಗೆ ಕಾಯಕದ ಮಹತ್ವ ಸಾರಿದ್ದಾರೆ. ಹಡಪದ ಸಮಾಜದ ಬಾಂಧವರೆಲ್ಲರೂ ಅಪ್ಪಣ್ಣನವರ ವಚನದ ಪುಸ್ತಕಗಳನ್ನು ಮನೆಯಲ್ಲಿಟ್ಟುಕೊಂಡು ನಿತ್ಯವೂ ಅವರ ವಚನಗಳನ್ನು ಮಕ್ಕಳಿಗೆ ಹಾಗೂ ಕುಟುಂಬದ ಎಲ್ಲರಿಗೂ ಓದಿಸಬೇಕು. ಆಗ ಮಾತ್ರ ಅಂದಾಗ ಅಪ್ಪಣ್ಣನವರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಈ ಸಂದರ್ಭದಲ್ಲಿ ಗ್ರಾ ಪಂ ಸದಸ್ಯರಾದ ಶಿವಪ್ಪ ಜಗ್ಲಿ, ವಿರೂಪಾಕ್ಷಿ ಜಗ್ಲಿ, ಮೃತ್ಯುಂಜಯ, ಸೇರಿದಂತೆ ಗ್ರಾಮಸ್ಥರಾದ ಮಹಾಂತೇಶ ಮ್ಯಾತ್ರಿ, ಹನುಮೇಶ, ವೀರಭದ್ರಯ್ಯ, ಹಡಪದ ಸಮಾಜದ ಮುಖಂಡರಾದ ಬಸವರಾಜ ಅತ್ತನೂರು, ಹನ್ಮಂತ್ರಾಯ ನಿಲೋಗಲ್, ಅಮರೇಶ, ಮಲ್ಲಿಕಾರ್ಜುನ ಅತ್ತನೂರು ಗ್ರಾ ಪಂ ಸಿಬ್ಬಂದಿಗಳು ಸೇರಿದಂತೆ ಬಹುತೇಕರು ಇದ್ದರು.

ವರದಿ : ಮಲ್ಲಿಕಾರ್ಜುನ ಅತ್ತನೂರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X