ತುಮಕೂರು | ಸಂವಿಧಾನ ಬದಲಾವಣೆ ಅಗತ್ಯವೇ? ಚರ್ಚಾ ಸ್ಪರ್ಧೆ; ಪ್ರಕರಣ ದಾಖಲಿಸದ ಪೊಲೀಸ್ ನಡೆಗೆ ದಸಂಸ ಖಂಡನೆ

Date:

Advertisements

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಬಾಣಸಂದ್ರ ರಸ್ತೆಯ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26ರಂದು ವಿವಿಧ ಸಂಘ ಸಂಸ್ಥೆಗಳಿಂದ ‘ಭಾರತದ ಸಂವಿಧಾನ ಬದಲಾವಣೆ ಅಗತ್ಯವೇ?’ ವಿಷಯದ ಕುರಿತು ಚರ್ಚಾ ಸ್ಪರ್ಧೆ ಆಯೋಜಿಸಲು ಸಿದ್ದತೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು ನೀಡಿದರೂ ತುರುವೇಕೆರೆ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡುತಿದ್ದಾರೆ ಎಂದು ಆರೋಪಿಸಿ ಡಿಎಸ್‌ಎಸ್ ಮುಖಂಡರು ತುರುವೇಕೆರೆ ಪೊಲೀಸ್ ಠಾಣೆ ಮುಂದೆ ದಿಢೀರ್ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದರು.

“ತುರುವೇಕೆರೆ ತಾಲೂಕಿನ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸುರಭಿ ಸಂಗಮ ಸಂಸ್ಥೆ ಸಹಯೋಗದಲ್ಲಿ ಈ ಚರ್ಚಾ ಸ್ಪರ್ಧೆ ಕಾರ್ಯಕ್ರಮ ಆಯೋಜನೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಹಾಗಾಗಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು ನೀಡಿದರರೂ ಕೂಡಾ ಪೊಲೀಸರು ಎಫ್‌ಐಆರ್ ದಾಖಲಿಸದೆ ಮೀನಾಮೇಷ ಎಣಿಸುತ್ತಿದ್ದಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರು ಮನುವಾದಿಗಳ ರಕ್ಷಣೆಗೆ ನಿಂತಿರುವುದು ಖಂಡನೀಯ” ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

Advertisements

“ತುರುವೇಕೆರೆ ಪೊಲೀಸ್ ಠಾಣೆ ಎದುರು ಅಂಬೇಡ್ಕರ್ ಪೋಟೋವಿಟ್ಟು ಡಿಎಸ್‌ಎಸ್, ಛಲವಾದಿ ಮಹಾಸಭಾ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ದೂರು ನೀಡಿದರೂ ಕ್ರಮ  ಕೈಗೊಳ್ಳಲು ವಿಳಂಬಧೋರಣೆ ತೋರಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣ ದಾಖಲಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ” ಎಂದು ಪ್ರತಿಭಟನಕಾರರು ಹೇಳಿದರು.

“ಸಂವಿಧಾನ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲರ ಒಳಿತಿಗೆ ಹಕ್ಕು ಬಾಧ್ಯತೆಗಳನ್ನು ನೀಡಿದೆ. ಕೆಲವರು ಸಂವಿಧಾನ ಬದಲಾವಣೆ ವಿಚಾರವನ್ನು ಮಕ್ಕಳ ಮನಸ್ಸಿಗೆ ತುರುಕಲು ಹೊರಟಿರುವುದು ಸರಿಯಲ್ಲ” ಎಂದು ಹೋರಾಟಗಾರ ಜಗದೀಶ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X