ಮಡಿಕೇರಿ | ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು: ಧರ್ಮಜ ಉತ್ತಪ್ಪ

Date:

Advertisements

ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, “ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು” ಎಂದರು.

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ಮಾಡಿದರು.

Advertisements

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ, ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ, ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‍ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಮೆಟಿಂಗ್

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದೆ. ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಮೋಹನ್‍ದಾಸ್, ವಿರಾಜಪೇಟೆ ಅಧ್ಯಕ್ಷರಾದ ಜಾನ್ಸನ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X