ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎನ್ನುತ್ತಾ ಜಿಲ್ಲಾಡಳಿತ ಹಾಗೂ ಸರ್ಕಾರ ರಾತ್ರಿ ಕಾರ್ಯಾಚರಣೆಯನ್ನು ತಡೆಹಿಡಿದಿದೆ. ಇದಕ್ಕೆ ಕೇರಳದಿಂದ ಬಂದಿರುವ ಸ್ವಯಂಸೇವಕರ ಸಹಿತ ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.