ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

Date:

Advertisements

“ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು ಈ ಬಜೆಟ್ ಅನ್ನು ಮಂಡಿಸಿದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಬಜೆಟ್ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, “ಮೋದಿ ಸರ್ಕಾರಕ್ಕೆ ‘ಕಾಪಿಕ್ಯಾಟ್ ಬಜೆಟ್’ ಮೂಲಕ ಕಾಂಗ್ರೆಸ್‌ನ ನ್ಯಾಯಪತ್ರವನ್ನು (ಪ್ರಣಾಳಿಕೆ) ಸರಿಯಾಗಿ ನಕಲಿಸಲು ಸಾಧ್ಯವಾಗಲಿಲ್ಲ” ಎಂದು ಲೇವಡಿ ಮಾಡಿದ್ದಾರೆ.

Advertisements

“ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮೋದಿ ಸರ್ಕಾರವು ಬಜೆಟ್ ಮೂಲಕ ತನ್ನ ಮಿತ್ರ ಪಕ್ಷಗಳನ್ನು ವಂಚಿಸುತ್ತಾ ಅರೆಬೆಂದ ರೇವಡಿಗಳನ್ನು ಹಂಚುತ್ತಿದೆ. ದೇಶದ ಪ್ರಗತಿಗಾಗಿ ಅಲ್ಲ, ‘ಮೋದಿ ಸರ್ಕಾರ ಉಳಿಸುವ’ ಬಜೆಟ್ ಇದಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹಾಗೆಯೇ ಸುಮಾರು ಹತ್ತು ಅಂಶಗಳನ್ನು ಉಲ್ಲೇಖಿಸಿದ್ದಾರೆ.

“ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಸಮಸ್ಯೆಯನ್ನು ಎದುರಿಸುತ್ತಿರುವ ಯುವಜನರಿಗೆ ಹತ್ತು ವರ್ಷಗಳ ನಂತರ ಸೀಮಿತ ಘೋಷಣೆಗಳನ್ನು ಮಾಡಲಾಗಿದೆ. ರೈತರ ಬಗ್ಗೆ ಕೇವಲ ಮೇಲ್ನೋಟದ ಮಾತುಗಳಿದೆ. ಒಂದೂವರೆ ಪಟ್ಟು ಎಂಎಸ್‌ಪಿ, ಆದಾಯವನ್ನು ದ್ವಿಗುಣಗೊಳಿಸುವುದು ಮೊದಲಾದವುಗಳು. ಎಲ್ಲವೂ ಚುನಾವಣಾ ವಂಚನೆಯಾಗಿದೆ. ಈ ಸರ್ಕಾರಕ್ಕೆ ಗ್ರಾಮೀಣ ವೇತನ ಹೆಚ್ಚಿಸುವ ಯಾವುದೇ ಇರಾದೆ ಇಲ್ಲ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

“ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಧ್ಯಮ ವರ್ಗ ಮತ್ತು ಗ್ರಾಮೀಣ ಬಡವರಿಗೆ ಕಾಂಗ್ರೆಸ್-ಯುಪಿಎ ಜಾರಿಗೆ ತಂದಂತಹ ಕ್ರಾಂತಿಕಾರಿ ಯೋಜನೆ ಇಲ್ಲ. ಬದಲಾಗಿ ‘ಬಡವರು’ ಎಂಬ ಪದವು ತನ್ನನ್ನು ತಾನು ಬ್ರಾಂಡ್ ಮಾಡಿಕೊಳ್ಳುವ ಸಾಧನವಾಗಿ ಮಾರ್ಪಟ್ಟಿದೆ” ಎಂದು ಟೀಕಿಸಿದರು.

“ಮಹಿಳೆಯರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವಂತಹ, ಮಹಿಳೆಯರು ಅಧಿಕವಾಗಿ ಉದ್ಯೋಗ ಕ್ಷೇತ್ರದಲ್ಲಿ ಭಾಗಿಯಾಗಲು ಅವಕಾಶ ನೀಡುವಂತಹ ಯಾವುದೇ ಯೋಜನೆಗಳು ಈ ಬಜೆಟ್‌ನಲ್ಲಿಲ್ಲ. ಬದಲಾಗಿ ಸರ್ಕಾರವು ಹಣದುಬ್ಬರದ ವಿಚಾರದಲ್ಲಿ ಮತ್ತೆ ತನಗೆ ತಾನು ಏಟು ಮಾಡಿಕೊಳ್ಳುತ್ತಿದೆ. ಜನರು ಕಷ್ಟಪಟ್ಟು ದುಡಿದ ಹಣವನ್ನು ಲೂಟಿ ಮಾಡಿ ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಹಂಚುತ್ತಿದೆ” ಎಂದು ದೂರಿದರು.

“ಕೃಷಿ, ಆರೋಗ್ಯ, ಶಿಕ್ಷಣ, ಸಾರ್ವಜನಿಕ ಕಲ್ಯಾಣ ಮತ್ತು ಬುಡಕಟ್ಟು ಜನಾಂಗದವರಿಗೆ ಬಜೆಟ್‌ನಲ್ಲಿ ಮೀಸಲಿಡುವುದಕ್ಕಿಂತ ಕಡಿಮೆ ಖರ್ಚು ಮಾಡಲಾಗಿದೆ. ಏಕೆಂದರೆ ಇವರುಗಳು ಬಿಜೆಪಿಗೆ ಆದ್ಯತೆಯಲ್ಲ. ಕ್ಯಾಪಿಟಲ್ ಬಜೆಟ್‌ನಲ್ಲಿ 1 ಲಕ್ಷ ಕೋಟಿ ರೂ.ಗಳಷ್ಟು ಕಡಿಮೆ ಖರ್ಚು ಮಾಡಿದ್ದರೆ ಉದ್ಯೋಗಗಳು ಹೇಗೆ ಹೆಚ್ಚಾಗುತ್ತದೆ” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

ಇನ್ನು “ರೈಲ್ವೆ ಅಪಘಾತಗಳು ಪ್ರತಿದಿನ ನಡೆಯುತ್ತಿವೆ. ರೈಲುಗಳ ಬೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಸಾಮಾನ್ಯ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದರೆ ಬಜೆಟ್‌ನಲ್ಲಿ ರೈಲ್ವೆ ಬಗ್ಗೆ ಏನನ್ನೂ ಹೇಳಿಲ್ಲ” ಎಂದು ಟೀಕಿಸಿದ್ದಾರೆ.

“ಜನಗಣತಿ ಮತ್ತು ಜಾತಿ ಗಣತಿ ಕುರಿತು ಏನನ್ನೂ ಹೇಳಿಲ್ಲ. ಆದರೆ ಇದು ಜನಗಣತಿ ಇಲ್ಲದೆ ಮಂಡಿಸುತ್ತಿರುವ ಐದನೇ ಬಜೆಟ್ ಆಗಿದೆ. ಇದು ಆಘಾತಕಾರಿ ಮತ್ತು ಅನಿರೀಕ್ಷಿತ ವೈಫಲ್ಯವಾಗಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

“2024ರ ಮೇ 20ರಂದು, ಅಂದರೆ ಚುನಾವಣೆಯ ಸಮಯದಲ್ಲಿ, ಮೋದಿ ಜಿ ಸಂದರ್ಶನವೊಂದರಲ್ಲಿ ‘ನಮ್ಮಲ್ಲಿ ಈಗಾಗಲೇ 100 ದಿನಗಳ ಕ್ರಿಯಾ ಯೋಜನೆ ಇದೆ’ ಎಂದು ಹೇಳಿಕೊಂಡಿದ್ದರು. ಎರಡು ತಿಂಗಳ ಹಿಂದೆ ಕ್ರಿಯಾ ಯೋಜನೆ ರೂಪಿಸಿದಾಗ ಕನಿಷ್ಠ ಬಜೆಟ್‌ನಲ್ಲಿಯಾದರೂ ಪ್ರಸ್ತಾಪಿಸಬಹುದಿತ್ತು. ಬಜೆಟ್‌ನಲ್ಲಿ ಯಾವುದೇ ಯೋಜನೆ ಇಲ್ಲ, ಬಿಜೆಪಿ ಮಾತ್ರ ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ನಿರತವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ಚಿದಂಬರಂ ಟ್ವೀಟ್

ಇನ್ನು ಕೇಂದ್ರ ಬಜೆಟ್ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಚುನಾವಣಾ ಫಲಿತಾಂಶದ ನಂತರ ಮಾನ್ಯ ಹಣಕಾಸು ಸಚಿವೆ ಅವರು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿದ್ದಾರೆ ಎಂದು ತಿಳಿದು ನನಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯ ಪುಟ 30ರಲ್ಲಿ ವಿವರಿಸಿರುವ ಉದ್ಯೋಗ-ಸಂಯೋಜಿತ ಪ್ರೋತ್ಸಾಹವನ್ನು (ಇಎಲ್‌ಐ) ಅವರು ವಾಸ್ತವಿಕವಾಗಿ ಅಳವಡಿಸಿಕೊಂಡಿದ್ದಾರೆ ಎಂದು ತಿಳಿದು ನನಗೆ ಸಂತೋಷವಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯ ಪುಟ 11ರಲ್ಲಿ ಉಲ್ಲೇಖಿಸಲಾಗಿರುವ ಪ್ರತಿ ಅಪ್ರೆಂಟಿಸ್‌ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ ಎಂಬುವುದು ತಿಳಿದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತರ ಕೆಲವು ವಿಚಾರಗಳನ್ನು ನಕಲು ಮಾಡಿದ್ದರೆ ಒಳಿತಿತ್ತು. ಏನೆಲ್ಲ ಕೈಬಿಡಲಾಗಿದೆ ಎಂದು ನಾನು ಶೀಘ್ರದಲ್ಲೇ ಪಟ್ಟಿ ಮಾಡಿ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X