ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

Date:

Advertisements

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ‘ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಆಗಿದೆ.  ಮೈತ್ರಿ ಪಕ್ಷದವರನ್ನು ಸಮಾಧಾನಪಡಿಸಿ ಇತರ ರಾಜ್ಯದವರಿಗೆ ಪೊಳ್ಳು ಭರವಸೆಗಳನ್ನು ನೀಡುವುದಾಗಿದೆ. ತಮ್ಮ ಶ್ರೀಮಂತ ಉದ್ಯಮಿಗಳನ್ನು ಸಮಾಧಾನಪಡಿಸಿ ಭಾರತದ ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಾಗದ ಬಜೆಟ್. ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಆಯವ್ಯಯಗಳ ಕಾಪಿ ಪೇಸ್ಟ್ ಬಜೆಟ್‌’ ಎಂದು ಟೀಕಿಸಿದ್ದಾರೆ.

Advertisements

ಕಾಂಗ್ರೆಸ್‌ನ 2024ರ ಚುನಾವಣೆಯ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್‌ ಬಜೆಟ್‌ ಆಗಿದೆ ಎಂದು ರಾಹುಲ್‌ ಹಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಎನ್‌ಡಿಎ ಸರ್ಕಾರದ ಬಜೆಟ್‌ಅನ್ನು ವಿರೋಧಿಸಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

“ಮೋದಿ ಸರ್ಕಾರಕ್ಕೆ ‘ಕಾಪಿಕ್ಯಾಟ್ ಬಜೆಟ್’ ಮೂಲಕ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಸರಿಯಾಗಿ ನಕಲಿಸಲು ಸಾಧ್ಯವಾಗಲಿಲ್ಲ. ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮೋದಿ ಸರ್ಕಾರವು ಬಜೆಟ್ ಮೂಲಕ ತನ್ನ ಮಿತ್ರ ಪಕ್ಷಗಳನ್ನು ವಂಚಿಸುತ್ತಿದೆ. ಇದು ದೇಶದ ಪ್ರಗತಿಗಾಗಿ ಅಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್” ಎಂದು ಟೀಕಿಸಿದ್ದಾರೆ.

“ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಸಮಸ್ಯೆಯನ್ನು ಎದುರಿಸುತ್ತಿರುವ ಯುವಜನರಿಗೆ ಹತ್ತು ವರ್ಷಗಳ ನಂತರ ಸೀಮಿತ ಘೋಷಣೆಗಳನ್ನು ಮಾಡಲಾಗಿದೆ. ರೈತರ ಬಗ್ಗೆ ಕೇವಲ ಮೇಲ್ನೋಟದ ಮಾತುಗಳಿದೆ. ಒಂದೂವರೆ ಪಟ್ಟು ಎಂಎಸ್‌ಪಿ, ಆದಾಯವನ್ನು ದ್ವಿಗುಣಗೊಳಿಸುವುದು ಮೊದಲಾದವುಗಳು. ಎಲ್ಲವೂ ಚುನಾವಣಾ ವಂಚನೆಯಾಗಿದೆ. ಈ ಸರ್ಕಾರಕ್ಕೆ ಗ್ರಾಮೀಣ ವೇತನ ಹೆಚ್ಚಿಸುವ ಯಾವುದೇ ಇರಾದೆ ಇಲ್ಲ” ಎಂದು ಆರೋಪಿಸಿದರು.

“ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಧ್ಯಮ ವರ್ಗ ಮತ್ತು ಗ್ರಾಮೀಣ ಬಡವರಿಗೆ ಕಾಂಗ್ರೆಸ್-ಯುಪಿಎ ಜಾರಿಗೆ ತಂದಂತಹ ಕ್ರಾಂತಿಕಾರಿ ಯೋಜನೆ ಇಲ್ಲ. ಬದಲಾಗಿ ‘ಬಡವರು’ ಎಂಬ ಪದವು ತನ್ನನ್ನು ತಾನು ಬ್ರಾಂಡ್ ಮಾಡಿಕೊಳ್ಳುವ ಸಾಧನವಾಗಿ ಮಾರ್ಪಟ್ಟಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X