ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ : ಮಲ್ಲಿಕಾರ್ಜುನ ಖರ್ಗೆ

Date:

Advertisements
  • ಬಿಜೆಪಿ ಸಾಧನೆ ಬರೀ 40% ಭ್ರಷ್ಟಾಚಾರವಷ್ಟೇ
  • 15 ಲಕ್ಷ ರೂಪಾಯಿ ಅದಾನಿ ಮನೆಯಲ್ಲಿರಬೇಕು

ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಗದಗ ಜಿಲ್ಲೆಯ ನರೇಗಲ್‌ನಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ ಜೆ ಎಸ್‌ ಪಾಟೀಲ್ ಅವರ ಪರ ಮತಯಾಚಿಸಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿರುವ ಮಲ್ಲಿಕಾರ್ಜುನ ಖರ್ಗೆ, “ಅವರ ಮನೆಯಲ್ಲಿ ದೇಶಕ್ಕಾಗಿ ಒಂದು ನಾಯಿಯೂ ಸತ್ತಿಲ್ಲ. ದೇಶಕ್ಕಾಗಿ ಬಿಜೆಪಿ ಕೊಡುಗೆ ಏನೆಂಬುವುದನ್ನು ಹೇಳಲಿ” ಎಂದು ಕಿಡಿಕಾರಿದ್ದಾರೆ.

Advertisements

“ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಸಾಧನೆ ಬರೀ 40%. ಅದೇ ಕಳ್ಳರನ್ನು ಮೋದಿ ತಮ್ಮ ಪಕ್ಕ ಕೂರಿಸಿಕೊಳ್ಳುತ್ತಾರೆ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

“2014ಕ್ಕಿಂತ ಮೊದಲು ಮೋದಿ ಸ್ವಿಸ್‌ ಬ್ಯಾಂಕಿನ ಹಣ ತಂದು 15 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದರು. ಇನ್ನೂ ಆ ದುಡ್ಡು ಬಯಲಿಗೆ ಬರಲಿಲ್ಲ. ಬಹುಶಃ ಅವೆಲ್ಲ ದುಡ್ಡು ಅದಾನಿ ಬಳಿ ಇಟ್ಟಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಡಬಲ್ ಇಂಜಿನ್ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜಿನ್ ಯಾಕೆ ನೌಕರಿ ಕೊಡ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರ್ಕಾರ ಇದ್ದಾಗ ದೊಡ್ಡ ದೊಡ್ಡ ಡ್ಯಾಂ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ‌ ಮೋದಿ ಏನ್ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...

Download Eedina App Android / iOS

X