ಪ್ಯಾರಿಸ್‌ | ಒಲಿಂಪಿಕ್ಸ್ ಕ್ರೀಡಾಕೂಟಕ್ಕೂ ಮುನ್ನ ಆಸ್ಟ್ರೇಲಿಯಾದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

Date:

Advertisements

ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಪ್ರವಾಸಿಗರ ಭದ್ರತೆಯ ಬಗ್ಗೆ ಆತಂಕ ಸೃಷ್ಟಿಯಾಗಿದೆ. ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯಾದ ಮಹಿಳೆಯೊಬ್ಬರು ತನ್ನ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಜುಲೈ 20ರಂದು ಬೆಳಿಗ್ಗೆ ಪ್ಯಾರಿಸ್‌ನ ಪಿಗಲ್ಲೆ ಜಿಲ್ಲೆಯ ಕಬಾಬ್ ಟಾಕೋಸ್ ಎಂಬ ರೆಸ್ಟೋರೆಂಟ್‌ನಲ್ಲಿ ಆಶ್ರಯ ಕೇಳುತ್ತಾ ಬಂದಿರುವುದು, ಆಕೆಯ ಉಡುಗೆ ಭಾಗಶಃ ಹರಿದು ಹೋಗಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ತುಣುಕು ಹರಿದಾಡುತ್ತಿದೆ.

ಈ ಪ್ರಕರಣದಲ್ಲಿ ಈವರೆಗೂ ಯಾವುದೇ ಬಂಧನವನ್ನು ಮಾಡಿಲ್ಲವಾದರೂ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

Advertisements

ಇದನ್ನು ಓದಿದ್ದೀರಾ?   ಕೊಡಗು | ಡ್ರಾಪ್ ಕೇಳಿದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

ಮಹಿಳೆಯನ್ನು ಸಂಕಷ್ಟದ ಸ್ಥಿತಿಯಲ್ಲಿ ನೋಡಿದ ರೆಸ್ಟೋರೆಂಟ್ ಮಾಲೀಕರು, ರೆಸ್ಟೋರೆಂಟ್‌ನಲ್ಲಿದ್ದ ಇತರರು ಮಹಿಳೆಗೆ ಸಹಾಯ ಮಾಡಿದ್ದಾರೆ. ಹಾಗೆಯೇ ಮಹಿಳೆಗೆ ಅಗ್ನಿಶಾಮಕ ದಳದವರು ಆರೈಕೆಯನ್ನು ಒದಗಿಸಿದದಾರೆ. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಬಿಚಾಟ್ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಪ್ಯಾರಿಸ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ. ಜುಲೈ 19ರಿಂದ 20ರ ರಾತ್ರಿ ನಡೆದಿರುವ ಸಾಮೂಹಿಕ ಅತ್ಯಾಚಾರದ ಆರೋಪದ ತನಿಖೆಯನ್ನು ಎರಡನೇ ನ್ಯಾಯಾಂಗ ಪೊಲೀಸ್ ತನಿಖೆಗೆ ವಹಿಸಲಾಗಿದೆ ಎಂದು ಕಚೇರಿ ತಿಳಿಸಿದೆ.

ಈ ನಡುವೆ ಆಸ್ಟ್ರೇಲಿಯನ್ ಒಲಿಂಪಿಕ್ ತಂಡದ ಮುಖ್ಯಸ್ಥ ಅನ್ನಾ ಮೀಯರೆಸ್ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯಾದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಪ್ಯಾರಿಸ್ ಕ್ರೀಡಾಕೂಟದ ಸಮಯದಲ್ಲಿ ಭದ್ರತೆಯನ್ನು ಅಧಿಕ ಮಾಡುವಂತೆ ಒತ್ತಾಯಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X