ಪಶ್ಚಿಮ ಬಂಗಾಳ | ಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉರುಳಿಬಿದ್ದ ದ್ವಾರ; ಹಲವರಿಗೆ ಗಾಯ

Date:

Advertisements

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ದ್ವಾರ ಕುಸಿದ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ದಾಂಡೇನಿಯಾ ಸಭಾಂಗಣದಲ್ಲಿ ಮಾಹಿತಿ ಮತ್ತು ಸಂಸ್ಖೃತಿ ಇಲಾಖೆ ಬಂಗಾಳದ ಪ್ರಸಿದ್ಧ ನಟ ಉತ್ತಮ್ ಕುಮಾರ್ ಅವರ 44ನೇ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಈ ಘಟನೆ ಜರುಗಿದೆ.

ಸಭಾಂಗಣಕ್ಕೆ ಬರುವ ಹೆಚ್ಚಿನ ಜನರನ್ನು ನಿರ್ವಹಣೆ ಮಾಡುವ ಸಲುವಾಗಿ ಬೃಹತ್‌ ದ್ವಾರವನ್ನು ನಿರ್ಮಿಸಲಾಗಿತ್ತು. ಇದ್ದಕ್ಕಿದ್ದಂತೆ ದ್ವಾರ ಕುಸಿದ ಕಾರಣ ದ್ವಾರದಡಿ ಹಲವರು ಸಿಲುಕಿದ್ದಾರೆ. ಇದರಿಂದಾಗಿ ಹಲವು ಮಂದಿ ಗಾಯಗೊಂಡರು.

Advertisements

ತುರ್ತು ಸೇವಾ ವಾಹನಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಜನರಿಗೆ ವೈದ್ಯಕೀಯ ನೆರವು ನೀಡಿದರು. ಕೆಲವರಿಗೆ ಸಣ್ಣ ಪ್ರಮಾಣದ ಗಾಯವಾದರೆ, ಇನ್ನು ಕೆಲವರಿಗೆ ತೀವ್ರವಾದ ಗಾಯವಾಗಿದೆ. ದ್ವಾರ ಬಿದ್ದ ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ವಿಡಿಯೋಗಳಲ್ಲಿ ದ್ವಾರ ಕುಸಿತವುಂಟಾಗಿ ಹಲವು ಮಂದಿ ಗಾಯಗೊಂಡ ನಂತರ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಈ ಸಭಾಂಗಣವನ್ನು ಮಮತಾ ಬ್ಯಾನರ್ಜಿ ಅವರು 2023 ಏಪ್ರಿಲ್‌ 13 ರಂದು ಉದ್ಘಾಟಿಸಿದ್ದರು.

ಬಂಗಾಳದ ಪ್ರಸಿದ್ಧ ನಟರಾದ ಉತ್ತಮ್ ಕುಮಾರ್ ನಿರ್ಮಾಪಕ, ನಿರ್ದೇಶಕ, ಸಂಗೀತ ನಿರ್ದೇಶಕ, ಹಿನ್ನೆಲೆ ಗಾಯಕರಾಗಿ ಕೆಲಸ ನಿರ್ವಹಿಸಿದ್ದಾರೆ. 1940 ರಿಂದ 1980ರ ದಶಕದವರೆಗೂ ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉತ್ತಮ್ ಕುಮಾರ್ ನಟಿಸಿದ್ದರು. ಬಂಗಾಳ ಸಿನಿಮಾ ಇತಿಹಾಸದಲ್ಲಿ ಇವರು ಅತ್ಯಂತ ಯಶಸ್ವಿ ಹಾಗೂ ಪ್ರಭಾವಿ ನಟರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X