ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Date:

Advertisements

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್  ಸೋಮಪ್ಪ ಶಿವಪ್ಪ ನಾಯ್ಕರ್ ಎರಡು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹಾವೇರಿ ಜಿಲ್ಲೆ ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದ ಪಂಚಯ್ಯ ಹೊಳಬಸಯ್ಯ ಹಿರೇಮಠ ಇವರ ಸಹೋದರನ ಹೆಸರಿನಲ್ಲಿ ವ್ಯವಸಾಯ ಖರೀದಿ ಮಾಡಿದ್ದರು. ಈ ಟ್ರ್ಯಾಕ್ಟರಿಗೆ ಸಂಬಂಧಿಸಿದಂತೆ ಬೋನಫೈಡ್ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದರು.

ಈ ಬೋನಫೈಡ್ ಪ್ರಮಾಣ ಪತ್ರ ನೀಡಲು ಕರ್ಜಗಿ ಉಪ ತಹಶೀಲ್ದಾರ್ ಸೋಮಪ್ಪ ಶಿವಪ್ಪ ನಾಯ್ಕರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೇ, ಪ್ರತಿ ಫೈಲ್ ವಿಲೇವಾರಿ ಮಾಡಲು ಐದು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.

Advertisements

ಅರ್ಜಿಯನ್ನು ವಿಲೇವಾರಿ ಮಾಡಲು ಸದರಿ ಫಿರ್ಯಾದುದಾರರಿಂದ ಸೋಮಪ್ಪ ಶಿವಪ್ಪ ನಾಯ್ಕರ್ ಅಧಿಕಾರಿ(ಜುಲೈ 24) ಎರಡು ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತರು ಯಶಸ್ವಿಯಾಗಿ ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸದರಿ ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೈಗೊಂಡು, ಸದರಿ ಆರೋಪಿತನನ್ನು ಕರ್ಜಗಿ ನಾಡಕಛೇರಿಯಲ್ಲಿ ದಸ್ತಗಿರಿ ಮಾಡಿದ್ದು, ಹಾವೇರಿ ನಗರದಲ್ಲಿನ ಆರೋಪಿತನ ಮನೆಯ ಶೋಧನೆಯನ್ನು ಕೈಗೊಂಡು ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X