ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್ ರವಿ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್ ಪುರಸಭೆಯ 22ನೇ ವಾರ್ಡ್ ಸದಸ್ಯರಾಗಿದ್ದರು.
ಇದನ್ನು ಓದಿದ್ದೀರಾ? ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ
ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ಆದರೆ ದಾಳಿ ಮಾಡಿದವರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸದ್ಯ ರವಿ ಪಾರ್ಥಿವ ಶರೀರವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.