ಬಹುಕೋಟಿ ಇ ತ್ಯಾಜ್ಯ ಟೆಂಡರ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ನಿರ್ದೇಶಕಿ ವಿ ಸುಮಂಗಲಾ ಅವರು ಅಮಾನತುಗೊಂಡಿದ್ದಾರೆ.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್‌ಟಿ) ನಿರ್ದೇಶಕಿಯಾಗಿರುವ ಸುಮಂಗಲಾ ಅವರು ಡಿಎಸ್ಇಆರ್‌ಟಿ ಮತ್ತು ಇತರೆ ಕಚೇರಿಗಳಲ್ಲಿ ಅನುಪಯುಕ್ತ ಇ-ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಟೆಂಡರ್‌ದಾರರೊಂದಿಗೆ ಕೈಜೋಡಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಮಾಡಿರುವ ಆರೋಪ ಇವರ ಮೇಲೆ ಕೇಳಿ ಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ
ಗಂಭೀರ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು , ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ತತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಗುರುವಾರ ಆದೇಶ ಹೊರಡಿಸಿದ್ದಾರೆ.
