ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

Date:

Advertisements

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು,”ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.

“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

Advertisements

“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

“ಮುಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ನನಗೆ ಹಾಗೂ 40 ವರ್ಷಗಳಿಂದ ಸುಧೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.

“ನನ್ನ ಮೇಲೆ ಆರೋಪ ಕೇಳಿಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿ ಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ನೇರವಾಗಿ ಆರೋಪಿಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ಪ್ರತೀ ಪತ್ರಗಳು, ಪ್ರತೀ ದಾಖಲೆಗಳನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗ ಪಡಿಸಿದರು.

ಮುಡಾ ಅಕ್ರಮ

“ಆಗ ಮೂಡದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಎಂದು ಖಾರವಾಗಿ ನುಡಿದರು.

“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಸಚಿವ ಬೈರತಿ ಸುರೇಶ್ ಅವರು, ಬಿಜೆಪಿ-ಜೆಡಿಎಸ್ ಮುಖಂಡರು ಮೂಡಾದಿಂದ ಪಡೆದಿರುವ ಸೈಟ್ ಗಳ ವಿವರ ಮತ್ತು ಹೆಸರನ್ನು ಓದಿ ದಾಖಲೆ ಮುಂದಿಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X