ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

Date:

Advertisements

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆಯು ಭದ್ರಾ ನದಿಯ ನೀರಿನಿಂದ ತುಂಬಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿತ್ತು. ಕಳಸದಿಂದ ಹೊರನಾಡಿಗೆ ಹೋಗುವ ರಸ್ತೆಯು ಸಂಪರ್ಕ ಕಡಿತಗೊಂಡಿತ್ತು.

ಈ ಬಗ್ಗೆ ಮುಂಜಾಗೃತ ಕ್ರಮವಾಗಿ ಹೆಬ್ಬಾಳೆ ಸೇತುವೆಯ ಮೇಲೆ ಸಾರ್ವಜನಿಕರ ಹಾಗೂ ವಾಹನ ಸಂಚಾರವನ್ನು ನಿಷೇಧಿಸಿ ಯಾವುದೇ ಪ್ರಾಣ ಹಾನಿಯಾಗದಂತೆ ತಡೆಗಟ್ಟುವ ಸಲುವಾಗಿ ಕಳಸ ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸ್‌ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕಳಸದಿಂದ ಹೊರನಾಡಿಗೆ ಹೊಗುವ ಮತ್ತು ಹೊರನಾಡಿನಿಂದ ಕಳಸಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಬದಲಿ ಮಾರ್ಗವನ್ನು ಕಲ್ಪಿಸಲಾಗಿತ್ತು. ಈ ವಿಚಾರವಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು.

Advertisements

ಜುಲೈ 25ರಂದು ಬೆಳಿಗ್ಗೆ ಸುಮಾರು 11ರಿಂದ 11-30ರ ಸಮಯ ಮಧ್ಯದಲ್ಲಿ, KA-18 P7284 ಸಂಖ್ಯೆಯ ಜೀಪ್‌ವೊಂದನ್ನು ಅದರ ಚಾಲಕ ಹೆಬ್ಬಾಳೆ ಸೇತುವೆ ಮೇಲೆ ಮುಂಜಾಗೃತ ಕ್ರಮವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರ ನಿಷೇಧಿಸಿದ್ದರೂ ವಾಹನದ ಚಾಲಕ ಪವನ್ ಕುಮಾ‌ರ್ ಎಂಬಾತ ಮುಂಜಾಗೃತ ಕ್ರಮವಾಗಿ ಅಳವಡಿಸಿದ ಬ್ಯಾರಿಕೇಡ್‌ಗಳನ್ನು ತೆಗೆದು ಭದ್ರಾನದಿಯ ನೀರು ಹೆಬ್ಬಾಳೆ ಸೇತುವೆ ಮೇಲೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೂ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯದಿಂದ ಪ್ರಾಣಕ್ಕೆ ಅಪಾಯವಿದೆಯೆಂದು ಗೊತ್ತಿದ್ದರೂ ವಾಹನ ಚಾಲನೆ ಮಾಡಿದ್ದರಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕಲಂ 281 ಬಿಎನ್‌ಎಸ್‌ ಕಾಯಿದೆ ಅಡಿ ಪ್ರಕರಣ ದಾಖಲಿಸಿ ಜೀಪ್‌ ಸೀಜ಼್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ; ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಪೊಲೀಸ್‌ ಇಲಾಖೆಯವರು ಮುಂಜಾಗೃತ ಕ್ರಮವಾಗಿ ಯಾವುದೇ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ನಿರ್ದೇಶನ ನೀಡಿರುವುದನ್ನು ಸಾರ್ವಜನಿಕರು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬ ಸಾರ್ವಜನಿಕರೂ ಇಲಾಖೆಯವರು ನೀಡಿರುವ ನಿರ್ದೇಶನಗಳನ್ನು ಪಾಲಿಸುವ ಮೂಲಕ ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X