ರಾಜಸ್ಥಾನದ ಸಲೂಂಬರ್ ಜಿಲ್ಲೆಯ ಅದ್ವಾಸ್ ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ದುಷ್ಕರ್ಮಿಯೊಬ್ಬ ದಾಳಿ ಮಾಡಿದ್ದು, ಘಟನೆಯನ್ನು ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶಿಕ್ಷಕ ಶಂಕರ್ ಮೇಘವಾಲ್ (40) ಎಂದು ಗುರುತಿಸಲಾಗಿದೆ. ಅವರು ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತಂದೆ ದಲ್ಚಂದ್ ಮೇಘವಾಲ್ (60) ಅವರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹತ್ಯೆಗೈದ ದಾಳಿಕೋರನನ್ನು ಫತೇ ಸಿಂಗ್ ಎಂದು ಗುರುತಿಸಲಾಗಿದೆ. ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.
ಘಟನೆಯ ನಂತರ, ಮೇಘವಾಲ್ ಸಮುದಾಯದ ಜನರು ಉದಯಪುರ ಆಸ್ಪತ್ರೆಯ ಹೊರಗೆ ಜಮಾಯಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.