ಪುನೀತ್​ ಕೆರೆಹಳ್ಳಿ ಬಂಧನ; ಠಾಣೆಯಲ್ಲಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Date:

Advertisements

ಬೆಂಗಳೂರಿಗೆ ಬೇರೆ ರಾಜ್ಯದಿಂದ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್​ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್​ಪೇಟೆ ಪೊಲೀಸರು ಪುನೀತ್​ ಕೆರೆಹಳ್ಳಿ ಅವರನ್ನು ರಾತ್ರಿ 12 ಗಂಟೆ ವೇಳೆಗೆ ಬಂಧಿಸಿದ್ದರು. ಠಾಣೆಯಲ್ಲಿ ಮಲಗಿದ್ದ ಪುನೀತ್ ಮುಂಜಾನೆ 4.45ರ ವೇಳೆಗೆ ಅಸ್ವಸ್ಥಗೊಂಡಿದ್ದು ಕೆ.ಸಿ.ಜನರಲ್​​ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ನಾಯಿ ಮಾಂಸ ಸಾಗಾಟ ಆರೋಪ?

Advertisements

ಶುಕ್ರವಾರ ರಾತ್ರಿ ಜೈಪುರದಿಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್‌ಗಳಲ್ಲಿ 4,500 ಕೆಜಿ ಕುರಿ ಮಾಂಸ ಸಾಗಿಸಲಾಗಿದ್ದು, ಇದರಲ್ಲಿ ನಾಯಿ ಮಾಂಸವನ್ನು ಕೂಡಾ ಸೇರ್ಪಡೆ ಮಾಡಲಾಗಿದೆ ಎಂದು ಪುನೀತ್​ ಕೆರೆಹಳ್ಳಿ ಆರೋಪಿಸಿದ್ದಾರೆ.

ರೈಲಿನಿಂದ ಈ ಬಾಕ್ಸ್‌ಗಳನ್ನು ಹೊರಗೆ ತರುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಮತ್ತು ಇತರರು ರೈಲು ನಿಲ್ದಾಣದಲ್ಲೇ ಬಾಕ್ಸ್‌ಗಳ ರವಾನೆಗೆ ಅಡ್ಡಿಪಡಿಸಿದ್ದರು. ಈ ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಇದೆ, ಸ್ವಚ್ಛವಾಗಿಲ್ಲ ಎಂದು ದೂರಿದ್ದರು.

ಇದನ್ನು ಓದಿದ್ದೀರಾ?  ಕೋಮು ದ್ವೇಷ ಹರಡಲು ಯತ್ನ: ಪುನೀತ್ ಕೆರೆಹಳ್ಳಿ ವಿರುದ್ಧ ಪೊಲೀಸ್ ದೂರು

ಆದರೆ ಮಾಂಸ ವ್ಯಾಪಾರಿ ಅಬ್ದುಲ್ ರಜಾಕ್, “ಇದು ಕುರಿ ಮಾಂಸವಾಗಿದೆ. ಪುನೀತ್ ಕೆರೆಹಳ್ಳಿ ಅವರಿಗೆ ರೋಲ್‌ ಕಾಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಈ ಮಾಂಸ ಸಾಗಾಟಕ್ಕೆ ನನ್ನ ಬಳಿ ಪರವಾನಗಿ ಇದೆ” ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಬಂಧಿಸಲಾಗಿದ್ದು, ಸದ್ಯ ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಮಾಂಸವನ್ನು ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ಗುಣಮಟ್ಟ ಹಾಗೂ ಮಾಂಸ ದೃಢೀಕರಣಕ್ಕಾಗಿ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, “ನಾವು ಒಟ್ಟು ನಾಲ್ಕು ಬಾಕ್ಸ್‌ಗಳಿಗೆ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ವಿವಿಧ ಭಾಗಗಳಿಂದ ಮಾಂಸದ ಮಾದರಿ ಪಡೆದಿದ್ದೇವೆ. ಇದನ್ನು ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಮಾಂಸದ ಪರೀಕ್ಷೆಯ ವರದಿ ಬರಲು 14 ದಿನಗಳು ಬೇಕಾಗುತ್ತದೆ. ಪರೀಕ್ಷೆಯಲ್ಲಿ ಈ ಮಾಂಸದ ಗುಣಮಟ್ಟ ಮತ್ತು ಇದು ಯಾವುದರ ಮಾಂಸ ಎಂದು ತಿಳಿಯಲಿದೆ. ಒಂದು ವೇಳೆ ದೂರಿನಂತೆ ಇದು ನಾಯಿ ಮಾಂಸವಾಗಿದ್ದರೆ ವ್ಯಾಪಾರಿಯ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ” ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X