ಜುಲೈ 31ರಿಂದ ಬೆಂಗಳೂರು – ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ

Date:

Advertisements

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ 31ರಂದು ಪ್ರಾರಂಭವಾಗಲಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ವಿಶೇಷ ರೈಲು ಮೂರು ವಾರಕ್ಕೊಮ್ಮೆ ಎರಡು ನಗರಗಳ ನಡುವೆ ಸಂಚರಿಸಲಿದೆ.

ಈ ರೈಲು ಪ್ರಯಾಣದ ಸಮಯ ಕಡಿಮೆ ಮಾಡುತ್ತದೆ. ಎರ್ನಾಕುಲಂನಿಂದ ಈ ರೈಲು ಸೇವೆ ಪ್ರತಿ ವಾರದಲ್ಲಿ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಲಭ್ಯವಿರುತ್ತದೆ.

ಎಂಟು ಬೋಗಿಗಳ ಸೆಮಿ-ಹೈ-ಸ್ಪೀಡ್ ರೈಲು ಎರ್ನಾಕುಲಂ ಜಂಕ್ಷನ್‌ನಿಂದ (ಇಆರ್‌ಎಸ್‌) 12:50ಕ್ಕೆ ಪ್ರಾರಂಭವಾಗಲಿದ್ದು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ರಾತ್ರಿ 10 ಗಂಟೆಗೆ ತಲುಪಲಿದೆ.

Advertisements

ಇದನ್ನು ಓದಿದ್ದೀರಾ?  ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

ಬೆಂಗಳೂರು ಕಂಟೋನ್ಮೆಂಟ್‌ನಿಂದ ರೈಲು ಬೆಳಿಗ್ಗೆ 5:30ಕ್ಕೆ ಹೊರಡಲಿದ್ದು, ಮಧ್ಯಾಹ್ನ 2.20ಕ್ಕೆ ಎರ್ನಾಕುಲಂ ತಲುಪಲಿದೆ. ಪ್ರತಿ ವಾರ ಗುರುವಾರ, ಶನಿವಾರ ಮತ್ತು ಸೋಮವಾರ ಈ ರೈಲು ಸೇವೆ ಇರಲಿದೆ.

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ರಿಶೂರ್, ಪಾಲಕ್ಕಾಡ್, ಪೊದನ್ನೂರ್, ತಿರುಪುರ್, ಈರೋಡ್ ಮತ್ತು ಸೇಲಂನಲ್ಲಿ ನಿಲುಗಡೆ ಹೊಂದಿದೆ.

ಕಳೆದ ದೀಪಾವಳಿ ವೇಳೆ ಈ ರೈಲು ಸೇವೆ ಆರಂಭವಾಗಬೇಕಿತ್ತು. ಆದರೆ ಹಲವಾರು ಕಾರಣದಿಂದಾಗಿ ಮುಂದೂಡಲಾಗಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X