ಮೋ-ಶಾರಿಂದ ಸಿಎಂ ಯೋಗಿಗೆ ಗೇಟ್‌ಪಾಸ್‌: ಬಿರುಸು ಪಡೆದ ಉತ್ತರ ಪ್ರದೇಶ ಬಿಜೆಪಿ ರಾಜಕಾರಣ

Date:

Advertisements
ಪ್ರಸ್ತುತ ಉತ್ತರ ಪ್ರದೇಶದ ರಾಜಕೀಯವು ದೇಶದ ಚಿತ್ತವನ್ನು ಸೆಳೆಯುತ್ತಿದೆ. ಪ್ರಬಲ ಹಿಂದುತ್ವವಾದಿ, ಗೋರಕ್ಷಕ್ ಎಂದೇ ಕರೆಸಿಕೊಂಡು ಗೊರಕ್‌ಪುರ ಮಠದಿಂದ ಬಂದಿರುವ ಯೋಗಿ ಆದಿತ್ಯನಾಥ್ ಅವರ ರಾಜಕೀಯ ಕೊನೆಗೊಳ್ಳುವುದೇ, ಮೂಲೆಗುಂಪಾಗುವುದೇ… ನೋಡಬೇಕು

ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾತನಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಮೋದಿ ಮತ್ತೆ ಪ್ರಧಾನಿಯಾದರೆ, ತಮ್ಮದೇ ಪಕ್ಷದ ಮುಖ್ಯಮಂತ್ರಿಗಳನ್ನು ಬದಲಿಸುತ್ತಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರಾಜಕೀಯವನ್ನೇ ಅಂತ್ಯಗೊಳಿಸುತ್ತಾರೆ’ ಎಂದು ಹೇಳಿದ್ದರು. ಜೈಲಿನಿಂದ ಹೊರಬಂದ ಅವರು ಹೇಳಿದ್ದ ಆ ಹೇಳಿಕೆ, ಚುನಾವಣಾ ಸಮಯದಲ್ಲಿ ಸಂಚಲನ ಮೂಡಿಸಿತ್ತು. ಆ ಹೇಳಿಕೆ ಸತ್ಯವೆಂಬಂತೆ ಇದೀಗ ಉತ್ತರ ಪ್ರದೇಶ ಬಿಜೆಪಿಯಲ್ಲಿ ಹಲವಾರು ವಿದ್ಯಮಾನಗಳು ಘಟಿಸುತ್ತಿವೆ.

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ, ಅಲ್ಲಿನ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ದೆಹಲಿ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಆಗಾಗ್ಗೆ ದೆಹಲಿಗೆ ದೌಡಾಯಿಸಿ, ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಮೌರ್ಯ ಅವರು ಯೋಗಿ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದು, ಅವರಿಬ್ಬರ ನಡುವಿನ ಮುಸುಕಿನ ಗುದ್ದಾಟ ದೆಹಲಿಯ ಬಿಜೆಪಿ ಪಡಸಾಲೆಗೆ ಬಂದು ನಿಂತಿದೆ. ಇನ್ನು, ಬಿಜೆಪಿ ರಾಜ್ಯಾದ್ಯಂತ ಭೂಪೇಂದ್ರ ಸಿಂಗ್ ಚೌಧರಿ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಇದೆಲ್ಲದರ ನಡುವೆ, ಯೋಗಿ ಅವರೇ 2027ರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಾರೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಮುಖ್ಯಮಂತ್ರಿ ಹುದ್ದೆಯಲ್ಲಿರುವ ಯೋಗಿ ಅವರನ್ನು ಕೆಳಗಿಳಿಸಬೇಕು ಎಂದು ಮೌರ್ಯ ನಿರಂತರವಾಗಿ ದೆಹಲಿಯಲ್ಲಿ ಲಾಬಿ ಮಾಡುತ್ತಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಇದೇ ಹೊತ್ತಿನಲ್ಲಿ ವಿರೋಧ ಪಕ್ಷಗಳು ಮೌರ್ಯ ಅವರನ್ನು ಪ್ರಚೋದಿಸುತ್ತಿವೆ.

Advertisements

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಮೌರ್ಯ ಅವರನ್ನು ಲೇವಡಿ ಮಾಡಿದ್ದು, ‘ನಾನು ಮೌರ್ಯ ಜಿ ಅವರನ್ನು ಕಾಲಾಳು ಎಂದು ಭಾವಿಸಿದ್ದೇನೆ. ಅವರು ದೆಹಲಿಯ ವೈಫೈ ಪಾಸ್ವರ್ಡ್’ ಎಂದು ಲೇವಡಿ ಮಾಡಿದ್ದಾರೆ. ಅವರ ಹೇಳಿಕೆಯು ಬಿಜೆಪಿಯಲ್ಲಿ ಮೌರ್ಯ ಕಾಲಾಳಿನಂತೆ ದುಡಿಯುತ್ತಿದ್ದರೆ, ಯೋಗಿ ಮರೆಯುತ್ತಿದ್ದಾರೆ ಎಂಬರ್ಥದಲ್ಲಿ ಪರೋಕ್ಷವಾಗಿ ಮೌರ್ಯ ಅವರನ್ನು ಚುಚ್ಚಿದೆ.

ಈ ನಡುವೆ, 2022ರ ವಿಧಾನಸಭಾ ಚುನಾವಣೆಯಲ್ಲಿ ಮೌರ್ಯ ಅವರನ್ನು ಸೋಲಿಸಿದ್ದ ಅಪ್ನಾ ದಳದ ನಾಯಕಿ ಪಲ್ಲವಿ ಪಟೇಲ್ ಅವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಕೂಡ ಮೌರ್ಯ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ಇದೀಗ, ಸದ್ಯ, ಯೋಗಿ ಮತ್ತು ಮೌರ್ಯ – ಇಬ್ಬರೂ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಯೋಗಿ, ನೀತಿ ಆಯೋಗದ ಸಭೆಗೂ ಮುನ್ನ ಬಿಜೆಪಿ ಹಿರಿಯ ನಾಯಕ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ. ಭಾನುವಾರ ಪ್ರಧಾನಿ ಮೋದಿ ಮತ್ತು ಇತರ ನಾಯಕರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ.

ಈ ಸಭೆಗಳು, ಭೇಟಿಗಳ ನಡುವೆ ಉತ್ತರ ಪ್ರದೇಶ ರಾಜಕೀಯದಲ್ಲಿ ಭಾರೀ ಗದ್ದಲ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ. ಸರ್ಕಾರವು ಅಲುಗಾಡುತ್ತಿದೆ – ಬದಲಾವಣೆಗಳು ಸಂಭವಿಸಲಿವೆ ಎಂಬ ಅಭಿಪ್ರಾಯಗಳು ಹೆಚ್ಚುತ್ತಿವೆ.

ಈ ವರದಿ ಓದಿದ್ದೀರಾ?: ಯೋಗಿ ಎಂಬ ಬಿಸಿತುಪ್ಪ; ಮೋದಿ- ಶಾ ಉಗುಳಿದರೆ ಕಷ್ಟ, ನುಂಗಿದರೂ ನಷ್ಟ

ಅಂದಹಾಗೆ, ಬಿಜೆಪಿಯಲ್ಲಿ ಪ್ರಧಾನಿ ಮೋದಿ ನಂತರ ಯೋಗಿ ಹೆಚ್ಚು ಪ್ರಭಾವಿ ಅಥವಾ ಮುನ್ನೆಲೆಯಲ್ಲಿದ್ದಾರೆ. ಆದರೆ, ಯೋಗಿಯ ಬೆಳವಣಿಗೆ ಮೋದಿಗಾಗಲೀ, ಅಮಿತ್ ಶಾಗಾಗಲೀ ಇಷ್ಟವಿಲ್ಲ ಎಂಬುದು ಕಳೆದ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲೇ ಖಚಿತವಾಗಿತ್ತು. 2022ರ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಗೆದ್ದ ಬಿಜೆಪಿ ಯೋಗಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲ ಎಂದು ಹೇಳಲಾಗಿತ್ತು. ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಬಹಳ ದಿನಗಳ ಕಾಲ ನಡೆದ ಬಳಿಕ, ಅದೃಷ್ಟವಶಾತ್ ಯೋಗಿಗೆ 2ನೇ ಬಾರಿಗೂ ಮುಖ್ಯಮಂತ್ರಿ ಹುದ್ದೆ ಒಲಿದಿತ್ತು. ಆದರೆ, ಯೋಗಿ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಗುರುತಿಸಿಕೊಳ್ಳುವುದು ಮೋದಿ-ಶಾ ಜೋಡಿಗೆ ಇಷ್ಟವಿಲ್ಲ. ಹೀಗಾಗಿ, ಯೋಗಿಯ ರಾಜಕೀಯ ಜೀವನವನ್ನು ಮುಗಿಸಲು ಈ ಇಬ್ಬರೂ ಹವಣಿಸುತ್ತಿದ್ದಾರೆ ಎಂಬ ಮಾತುಗಳೂ ಇವೆ.

ಆ ಕಾರಣಕ್ಕಾಗಿಯೇ ಕೇಜ್ರಿವಾಲ್ ಅವರು 2024ರ ಲೋಕಸಭಾ ಚುನಾವಣೆ ಮುಗಿದ ನಂತರ ಯೋಗಿ ರಾಜಕೀಯ ಅಂತ್ಯವಾಗುತ್ತದೆ ಎಂದು ಹೇಳಿದ್ದರು. ಈಗ ಅಂತದ್ದೇ ಚರ್ಚೆ ಬಿರುಸು ಪಡೆದುಕೊಂಡಿದೆ. ಇನ್ನು, ಉತ್ತರ ಪ್ರದೇಶದಲ್ಲಿ ಏನೇ ಆದರೂ ಅದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಇಚ್ಛೆಯಂತೆಯೇ ನಡೆಯುತ್ತದೆ. ಶೀಘ್ರದಲ್ಲೇ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲಾಗುತ್ತದೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

ಅದೇನೇ ಇರಲಿ, ಪ್ರಸ್ತುತ ಉತ್ತರ ಪ್ರದೇಶದ ರಾಜಕೀಯವು ದೇಶದ ಚಿತ್ತವನ್ನು ಸೆಳೆಯುತ್ತಿದೆ. ಪ್ರಬಲ ಹಿಂದುತ್ವವಾದಿ, ಗೋರಕ್ಷಕ್ ಎಂದೇ ಕರೆಸಿಕೊಂಡು ಗೊರಕ್‌ಪುರ ಮಠದಿಂದ ಬಂದಿರುವ ಯೋಗಿ ಆದಿತ್ಯನಾಥ್ ಅವರ ರಾಜಕೀಯ ಕೊನೆಗೊಳ್ಳುವುದೇ, ಮೂಲೆಗುಂಪಾಗುವುದೇ ಅಥವಾ ಮುಂದುವರೆಯುವುದೇ ಕಾದುನೋಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X