ವನ್ಯಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ: ಸಚಿವ ಈಶ್ವರ ಖಂಡ್ರೆ

Date:

Advertisements
  1. ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Advertisements

ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X