ಕಾವಡ್ ಯಾತ್ರೆ ಮಾರ್ಗದಲ್ಲಿ ಮಸೀದಿ, ಮಝಾರ್ ಕಾಣದಂತೆ ಪರದೆ; ವ್ಯಾಪಕ ಆಕ್ರೋಶ

Date:

Advertisements

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕಾವಡ್ ಯಾತ್ರೆಗೆ ಮಾರ್ಗ ಗುರುತಿಸಲಾಗಿದ್ದು, ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಪರದೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಸರ್ಕಾರದ ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪವಾಗಿದ್ದು, ಬಳಿಕ ಪರದೆಗಳನ್ನು ತೆರವುಗೊಳಿಸಲಾಗಿದೆ.

ಇತ್ತೀಚೆಗೆ, ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಕಾವಡ್ ಯಾತ್ರೆ ವೇಳೆ ಅಂಗಡಿ ಮಳಿಗೆಗಳ ಮಾಲೀಕರು ತಮ್ಮ ಹೆಸರುಳ್ಳ ನಾಮಫಲಕಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸಬೇಕೆಂದು ಪೊಲೀಸರು ಆದೇಶ ಹೊರಡಿಸಿದ್ದರು. ಆದೇಶವು ವಿವಾದ ಸೃಷ್ಟಿಸಿತ್ತು. ಬಳಿಕ, ಪೊಲೀಸರ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಇದೀಗ, ಉತ್ತರಾಖಂಡದ ಹರಿದ್ವಾರದಲ್ಲಿ ಅಂತದ್ದೇ ವಿವಾದವನ್ನು ಆಡಳಿತ ಸೃಷ್ಟಿಸಿದೆ.

ಹರಿದ್ವಾರದ ಜ್ವಾಲಾಪುರ ಪ್ರದೇಶದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಮುಂದೆ ಬಿದಿರಿನ ಬಂಬುಗಳನ್ನು ಕಟ್ಟಿ, ಬಿಳಿ ಬಣ್ಣದ ಪರದೆಗಳನ್ನು ಹಾಕಲಾಗಿತ್ತು. ಶಾಂತಿ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸತ್ಪಾಲ್ ಮಹಾರಾಜ್ ಸಮರ್ಥಿಸಿಕೊಂಡಿದ್ದರು. ಅಲ್ಲದೆ, ಇದೇನು ದೊಡ್ಡ ವಿಷಯವಲ್ಲ. ನಾವು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಕೂಡ ಮುಚ್ಚಿದ್ದೇವೆ ಎಂದು ಹೇಳಿದ್ದಾರೆ.

Advertisements

ಅದಾಗ್ಯೂ, ವಿಪಕ್ಷಗಳು ಹಾಗೂ ಸ್ಥಳೀಯರ ಆಕ್ಷೇಪ, ಆಕ್ರೋಶಕ್ಕೆ ಮಣಿದಿರುವ ಜಿಲ್ಲಾಡಳಿತ ಪರದೆಗಳನ್ನು ತೆಗೆದುಹಾಕಿದೆ. “ನಾನು ನನ್ನ ಜೀವನದಲ್ಲಿ ಇಂತಹದ್ದನ್ನು ನೋಡಿಲ್ಲ. ನಾವು ಮುಸ್ಲಿಮರು ಯಾವಾಗಲೂ ಕಾವಡ್ ಯಾತ್ರೆ ವೇಳೆ ಶಿವಭಕ್ತರನ್ನು ಸ್ವಾಗತಿಸುತ್ತೇವೆ. ಅವರಿಗೆ ವಿವಿಧ ಸ್ಥಳಗಳಲ್ಲಿ ಉಪಹಾರಗಳನ್ನು ಒದಗಿಸುತ್ತೇವೆ. ಹರಿದ್ವಾರದಲ್ಲಿ ಹಿಂದು-ಮುಸ್ಲಿಮರ ನಡುವೆ ಸೌಹಾರ್ದತೆ ಇದೆ. ಆದರೆ, ಸರ್ಕಾರ ವಿಭಜಿಸುವ ಪ್ರಯತ್ನ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ನಯೀಮ್ ಖುರೇಷಿ ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X