ಮಂಡ್ಯ | ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಅಗತ್ಯ: ರೈತ ಸಂಘದ ಮುಖಂಡ ಪಾಪು ಆಗ್ರಹ

Date:

Advertisements

ಲಕ್ಷಾಂತರ ಕ್ಯೂಸೆಕ್ ಕಾವೇರಿ ನೀರು ಸುಮ್ಮನೆ ವ್ಯರ್ಥವಾಗಿ ಸಮುದ್ರದ ಒಡಲು ಸೇರುತ್ತಿರುವುರಿಂದ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ರೂಪಿಸಲು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೇಂದ್ರದೊಂದಿಗೆ ಚರ್ಚೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಮೋಹನ್‌ಕುಮಾರ್ ಪಾಪು ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ರಾಜ್ಯದ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು, ಮಂಡ್ಯ ಸಂಸದರೂ ಆದ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು, ಪಕ್ಷಾತೀತವಾಗಿ ಎಲ್ಲಾ ಪಕ್ಷದ ಸಂಸದರು, ಕೇಂದ್ರ ಸಚಿವರುಗಳು, ಶಾಸಕರುಗಳನ್ನು ಒಳಗೊಂಡಂತೆ ಪ್ರಧಾನಮಂತ್ರಿ ಮೋದಿಯವರ ಜೊತೆ ಸುದೀರ್ಘವಾಗಿ ಚರ್ಚಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಮೋಹನ್‌ಕುಮಾರ್ ಉ.ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅತಿಹೆಚ್ಚು ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ರಾಜ್ಯದ ಹಿತ ಕಾಪಾಡಬೇಕಾದ ಸರ್ಕಾರಗಳು ಕಾವೇರಿ ಉಳಿವಿಗಾಗಿ ಕೆಆರ್‌ಎಸ್ ಅಣೆಕಟ್ಟಿನ ಜಲಾಶಯ ತುಂಬಿ ಲಕ್ಷಾಂತರ ಕ್ಯೂಸೆಕ್ ನೀರು ಕಾವೇರಿ ನದಿಯಿಂದ ಹೊರಹೋಗುತ್ತಿದೆ. ಆ ನೀರು ಪೋಲಾಗದಂತೆ ತಡೆಯಲು ಮೇಕೆದಾಟು ಯೋಜನೆ ತುಂಬಾ ಅನಿವಾರ್ಯವಾಗಿದೆ ಎಂದರು.

Advertisements

ತಮಿಳುನಾಡು ಸರ್ಕಾರ ಜಲಾಶಯದಲ್ಲಿ ನೀರು ಇಲ್ಲದಿದ್ದರೂ ನೀರು ಬಿಡಿ ಬಿಡಿ ಎಂದು ಕ್ಯಾತೆ ತೆಗೆದು ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ಈಗಲಾದರೂ ಮೇಕೆದಾಟು ಯೋಜನೆಯನ್ನು ರೂಪಿಸಿ ಲಕ್ಷಾಂತರ ಕ್ಯೂಸೆಕ್ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಿ ಅದನ್ನು ರೈತರ ಹಿತಕ್ಕಾಗಿ, ಪ್ರಾಣಿಪಕ್ಷಿಗಳು, ಜನಸಾಮಾನ್ಯರ ಕುಡಿಯುವ ನೀರಿಗಾಗಿ ಸಂಕಷ್ಟದ ಸಮಯದಲ್ಲಿ ಅಮೂಲ್ಯವಾದ ಜಲ ಬಳಕೆಯಾಗುತ್ತದೆ. ಆದ್ದರಿಂದ ತುಂಬಿ ಹರಿಯುತ್ತಿರುವ ಕಾವೇರಿ ನೀರು ಸಮುದ್ರದ ಪಾಲಾಗುತ್ತಿರುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾವೇರಿ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಭರವಸೆ ನೀಡಿದ್ದ ಕಾವೇರಿ ಕೊಳ್ಳದ ಸಂಸದರೂ, ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿರವರು ಕೊಟ್ಟ ಮಾತನ್ನು ಮೋದಿಯವರನ್ನು ಮನವೊಲಿಸಿ ಮಂಡ್ಯ ಜಿಲ್ಲೆಯ ರೈತರ, ಜನಸಾಮಾನ್ಯರ ಹಿತ ಕಾಪಾಡಲು ಮುಂದಾಗುತ್ತಾರಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಹಣ ದುರುಪಯೋಗ : ನನ್ನಿವಾಳ ಗ್ರಾ.ಪಂ. ಪಿಡಿಒ ಅಮಾನತು

ಸಮಸ್ಯೆ ಇತ್ಯರ್ಥಪಡಿಸಲು ಮುಂದಾದರೆ ರಾಜ್ಯದ ರೈತರು ಅವರ ಪರ ನಿಲ್ಲುತ್ತಾರೆ. ಇಂಥ ಸಮಯದಲ್ಲಿ ಮೇಲ್ಕಂಡವರು ಯಾವುದೇ ತಾರತಮ್ಯ ಮಾಡದೆ ರಾಜ್ಯದ ರೈತರ ಹಿತಕ್ಕಾಗಿ ಹಾಗೂ ಕಾವೇರಿ ಉಳಿವಿಗಾಗಿ ಒಗ್ಗೂಡಿ ಶ್ರಮಿಸುವಂತೆ ಪಾಪು ಮತ್ತೊಮ್ಮೆ ಪಾಪು ಕಳಕಳಿ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X