ಬಸ್ ಹಾಗೂ ಕಾರು ಮಧ್ಯ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಲಿಂಗಸಗೂರು ತಾಲೂಕಿನ ಅಡವಿಭಾವಿ ಕ್ರಾಸ್ ಬಳಿ ನಡೆದಿದೆ.
ಮೃತರು ಲಿಂಗಸಗೂರು ನಗರದ ಕರಡಕಲ್ ನಿವಾಸಿಗಳು ಎಂದು ಗುರುತಿಸಲಾಗಿದೆ. ನಾರಾಯಣಪುರ ಡ್ಯಾಂ ವೀಕ್ಷಿಸಲು ಜಲಾಶಯದತ್ತ ತೆರಳಿದ್ದರು. ಎದುರುಗಡೆಯಿಂದ ಬಂದ ಸಾರಿಗೆ ಬಸ್ ಮಧ್ಯ ಅಪಘಾತ ಸಂಭವಿಸಿ ದುರ್ಘಟನೆ ನಡೆಸಿದೆ .
ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ ನಡೆಸಿದರು.ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .