ಕಾವೇರಿ ಜಲಾನಯನ ಪ್ರದೇಶವಾದ ಕೊಡಗು, ಹಾಸನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ.
ಹಾರಂಗಿ ಹಾಗೂ ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನದಿಗೆ ಹರಿಸಲಾಗುತ್ತಿದೆ. ಪರಿಣಾಮವಾಗಿ ಕೃಷ್ಣರಾಜ ಸಾಗರ ಭರ್ತಿಯಾಗಿ 124.80 ಅಡಿ ನೀರು ತುಂಬಿದೆ.
12000೦ ಕ್ಯೂಸೆಕ್ ನೀರು ಒಳಹರಿವು ಇದ್ದು, 13000೦ ಕ್ಯುಸೆಕ್ಸ್ ನೀರನ್ನು ಹೊರ ಹರಿಯಲು ಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದ ಅಣೆಕಟ್ಟೆಯಲ್ಲಿ 49 ಟಿಎಂಸಿ ನೀರು ಸಂಗ್ರಹವಾಗಿದೆ.
ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜು.29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಿಗ್ಗೆ 10 ಗಂಟೆಗೆ ಬಂದು ಬಾಗಿನ ಕೊಡಲಿದ್ದಾರೆ.
ನದಿಯ ಎರಡು ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಸಿಗುವುದಿಲ್ಲ.
ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ಹಣವನ್ನು ಮೀಸಲಿರಿಸಲಾಗಿದೆ. ಮಂಡ್ಯ ಜಿಲ್ಲೆಗೂ ಸಹ 20 ಕೋಟಿ ಹಣ ಕಾಯ್ದಿರಿಸಲಾಗಿದೆ. ಎಲ್ಲಾ ತಾಲ್ಲೂಕುಗಳಿಗೆ 25 ಲಕ್ಷ ರೂ ಲಭ್ಯವಾಗಿದೆ ಎಂಬ ಮಾಹಿತಿ ಸಿಕ್ಕೆದೆ.
ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್‌ಡಿಆರ್‌ಎಫ್ ತಂಡಕ್ಕೆ ಬರುವುದು ಎಂಬ ಮಾಹಿತಿ ಲಭ್ಯವಾಗಿದೆ.
