ರಸ್ತೆ ಗುಂಡಿ ಗುರುತಿಸಲು ಬಿಬಿಎಂಪಿಯಿಂದ ಮೊಬೈಲ್‌ ಅಪ್ಲಿಕೇಶನ್

Date:

Advertisements

ನಗರದಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗದಿತ ಅವಧಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಬಿಬಿಎಂಪಿ ‘ರಸ್ತೆ ಗುಂಡಿ ಗಮನ- ಮೊಬೈಲ್ ಅಪ್ಲಿಕೇಶನ್ ತಯಾರಿಸಿದೆ.

ಪಾಲಿಕೆ ವ್ಯಾಪ್ತಿಯ ಎಲ್ಲ ರಸ್ತೆಗಳನ್ನು ಜಿಪಿಎಸ್ ಆಧಾರದ ಮೇಲೆ ಗುರುತಿಸಲಾಗುತ್ತದೆ. ಆ ರಸ್ತೆಗಳಲ್ಲಿ ಉಂಟಾಗಬಹುದಾದ ಗುಂಡಿಗಳನ್ನು ಅಕ್ಷಾಂಶ ಮತ್ತು ರೇಖಾಂಶದಲ್ಲಿ ನಿಖರವಾಗಿ ಗುರುತಿಸಿ, ಮೊಬೈಲ್‌ನಲ್ಲಿ ಗುಂಡಿಯ ಅಳತೆಯನ್ನು ನಮೂದಿಸ ಲಾಗುತ್ತದೆ. ಪ್ರತ್ಯೇಕ ಕಾರ್ಯಾದೇಶ ತಯಾರಿಸಿ ಗುಂಡಿ ಮುಚ್ಚಲು ಕ್ರಮವಹಿಸುವ ಪದ್ಧತಿಯನ್ನು ಮೊಬೈಲ್ ಆ್ಯಪ್‌ನಲ್ಲಿ ಅಳವಡಿಸಲಾಗಿದೆ.

ಈ ತಂತ್ರಾಂಶ ಅಳವಡಿಸುವುದರಿಂದ ರಸ್ತೆ ಗುಂಡಿ ಗುರುತಿಸುವ ಮತ್ತು ಅವುಗಳನ್ನು ಮುಚ್ಚುವ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ. ವೆಚ್ಚದ ಮೇಲೆ ನಿಯಂತ್ರಣ ಇಡಲು ಸಾಧ್ಯವಾಗುತ್ತದೆ. ನಿಗಾ ಇಡುವುದು ಸುಲಭವಾಗುತ್ತದೆ. ಸಾಂದರ್ಭಿಕ ಅಂದಾಜು ವೆಚ್ಚದ ಪಟ್ಟಿ ತಯಾರಿ ಸಹಿತ ಅನೇಕ ಕಾರ್ಯಗಳ ಅಗತ್ಯ ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಗುಂಡಿ ಮುಚ್ಚಲು 2024-25ನೇ ಸಾಲಿನಲ್ಲಿ ಪ್ರತಿ ವಾರ್ಡ್‌ಗಳಿಗೆ ₹15 ಲಕ್ಷದಂತೆ 225 ವಾರ್ಡ್‌ಗಳಿಗೆ ₹33.75 ಕೋಟಿ ಮೀಸಲಿಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಜುಲೈ 31ರಿಂದ ಬೆಂಗಳೂರು – ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ

ಬೆಂಗಳೂರಿನ ರಸ್ತೆಜಾಲ:

ನಗರದಲ್ಲಿ 12,828 ಕಿ.ಮೀ ಉದ್ದದ ರಸ್ತೆ ಜಾಲವಿದೆ. ಈ ಪೈಕಿ 1,344 ಕಿ.ಮೀ ಪ್ರಮುಖ ರಸ್ತೆಗಳು ಹಾಗೂ 11,533 ಕಿ.ಮೀ ವಲಯ ಮಟ್ಟದ ರಸ್ತೆಗಳು ಇವೆ. ಈ ರಸ್ತೆಗಳ ತಳಭಾಗದಲ್ಲಿ ಬೆಸ್ಕಾಂ ಕೇಬಲ್, ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆಗಳು, ಅನಿಲ ಕೊಳವೆಗಳು, ಒಎಫ್‌ಸಿ, ಕೆಪಿಟಿಸಿಎಲ್‌ನ ಹೆಚ್ಚಿನ ಸಾಮರ್ಥ್ಯದ ಕೇಬಲ್‌ಗಳ ಅಳವಡಿಕೆಯಿಂದ ರಸ್ತೆಗಳ ಮೇಲ್ಮೈ ಭಾಗವು ಶಿಥಿಲಗೊಂಡು ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ.

ಸಾರ್ವಜನಿಕರಿಗೂ ಅವಕಾಶ

‘ರಸ್ತೆ ಗುಂಡಿ ಗಮನ’ ತಂತ್ರಾಂಶದಲ್ಲಿ ಬಿಬಿಎಂಪಿ ಅಧಿಕಾರಿಗಳು, ಸಂಚಾರ ಠಾಣೆಗಳ ಪೊಲೀಸರು ಮಾತ್ರವಲ್ಲದೇ ಸಾರ್ವಜನಿಕರೂ ಗುಂಡಿಗಳ ಬಗ್ಗೆ ಮಾಹಿತಿ ಅಪ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ.

(https://play.google.com/store/apps/details?id=com.indigo.bbmp.fixpothole) ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಗುಂಡಿಗಳ ಫೋಟೊ, ದುರಸ್ತಿ ಫೋಟೊಗಳ ಸಹಿತ ಮಾಹಿತಿ ನೀಡಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. First sack who ever is taking Bribe.
    Next Hire a merit experienced civil engineer irrespective of reservation system.
    Remove special rescue law for reservation staffs.
    Stop political interference who impose bribe collection target for their pocket from officer staff.
    Select honest ,loyal, sincere candidates who work for the people,country.
    If above all is taken care , waste of public money on software to identify path home on the road. Looks funny 😂

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X