ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜಾರ್ಖಂಡ್ ಹೈಕೋರ್ಟ್ ಜೂನ್ 28ರಂದು ‘ಸಮರ್ಪಕವಾಗಿ ತರ್ಕಬದ್ಧ ಆದೇಶ’ ನೀಡಿದೆ ಎಂದು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಹೈಕೋರ್ಟ್ ಜಾಮೀನು ನೀಡಿರುವುದು ವಿಚಾರಣಾ ನ್ಯಾಯಾಲಯದ ನ್ಯಾಯಧೀಶರ ತೀರ್ಪು ಅಥವಾ ಇತರೆ ಯಾವುದೇ ವಿಚಾರಣೆಗಳಲ್ಲಿ ಪ್ರಭಾವ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಜನವರಿ 31 ರಂದು ಬಂಧಿಸಿತ್ತು. ರಾಂಚಿಯಲ್ಲಿ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ಕೋರ್ಟ್‌ಗೆ ತಿಳಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?
ಜನವರಿ 31 ರಂದು ಹೇಮಂತ್ ಸೊರೇನ್ ಅವರನ್ನು ಬಂಧಿಸುವ ಮುನ್ನ ಜಾರಿ ನಿರ್ದೇನಾಲಯ ಹಲವು ಬಾರಿ ಸಮನ್ಸ್ ಜಾರಿಗೊಳಿಸಿತ್ತು. ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಅಕ್ರಮ ಹಣ ವರ್ಗಾವಣೆ ಕಾಯ್ದೆ ಅನ್ವಯ ಅಪರಾಧವಾಗುವುದಿಲ್ಲ ಎಂದು ಹೇಮಂತ್ ಸೊರೇನ್ ಪರ ವಕೀಲರಾದ ಕಪಿಲ್ ಸಿಬಲ್ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.
ಭೂ ಹಗರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ “ದೊಡ್ಡ ದಂಧೆ” ಅನ್ನು ಒಳಗೊಂಡಿದೆ ಎಂದು ಸಂಸ್ಥೆ ಆರೋಪಿಸಿತ್ತು. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.
