ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಕೇಂದ್ರದಿಂದ ಕರ್ನಾಟಕಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ | Union Budget 2024 | Nirmala Seetharaman | BJP
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: