ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ಹರಿದು ಆರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
ಈ ಆರು ಜಾನುವಾರುಗಳು ಕೂಡಾ ಇದೇ ಗ್ರಾಮದ ರೈತ ಬೊಜ್ಜಂಗಡ ನಟರಾಜ್ (ನಂದಾ) ಅವರಿಗೆ ಸೇರಿದ್ದು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ವಿಜಯಪುರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೇಲೆ ಹಿಂದುತ್ವವಾದಿಗಳಿಂದ ಹಲ್ಲೆ
ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಸುಮಾರು 11 ಕೆವಿ ವಿದ್ಯುತ್ ತಂತಿ ಕಡಿದು ಜಾನುವಾರುಗಳ ಮೇಲೆ ಬಿದ್ದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಸದ್ಯ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಶಾಲಾ ಕಾಲೇಜುಗಳಿಗೆ ಇಂದು ರಜೆ
ಕೊಡಗು ಜಿಲ್ಲೆಯ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು (ಮಂಗಳವಾರ) ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ ಅವರು ತಿಳಿಸಿದ್ದಾರೆ. ಪದವಿ ಪೂರ್ವ ಕಾಲೇಜುಗಳಿಗೂ ರಜೆ ನೀಡಲಾಗಿದೆ ಎಂದು ಪಿಯುಡಿಡಿ ಮಂಜುಳಾ ಅವರು ತಿಳಿಸಿದ್ದಾರೆ.
Hi